shivamogga news today  : ಪಿಳ್ಳಂಗೆರೆಯಲ್ಲಿ ನಿನ್ನೆ ನಡೆಯಿತು ಭೀಕರ ಘಟನೆ | ಫೋಟೋಗ್ರಾಫರ್​ ಸಾವು

shivamogga news today  :  ರಸ್ತೆಯಲ್ಲಿ ನಿಲ್ಲಿಸಿದ್ದ ಗೂಡ್ಸ್​ ವಾಹನಕ್ಕೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯ ಪಿಳ್ಳಂಗೆರೆ ಗ್ರಾಮದಲ್ಲಿ ನಡೆದಿದೆ.

ಭದ್ರಾವತಿ ತಾಲೂಕಿನ ಹನುಮಂತಾಪುರ ಗ್ರಾಮದ ನಿವಾಸಿ  ಚೇತನ್ ಹೆಚ್.ಪಿ (36) ಮೃತ ದುರ್ದೈವಿ.

shivamogga news today  : ಹೇಗಾಯ್ತು ಘಟನೆ

ಫೋಟೋಗ್ರಾಫರ್ ಕೆಲಸ ಮಾಡಿಕೊಂಡಿದ್ದ ಮೃತ ಚೇತನ್ ತನ್ನ  ಸ್ನೇಹಿತನೊಂದಿಗೆ ಶಿವಮೊಗ್ಗಕ್ಕೆ ಹೋಗಿದ್ದರು. ಅಲ್ಲಿಂದ ವಾಪಸ್​ ಬರುವಾಗ ಶಿವಮೊಗ್ಗ- ಹೊಳೆಹೊನ್ನೂರು ರಸ್ತೆಯ ಪಿಳ್ಳಂಗೆರೆ ಬಳಿಯಲ್ಲಿ ನಿಲ್ಲಿಸಿದ್ದ ಗೂಡ್ಸ್ ವಾಹನಕ್ಕೆ ಚೇತನ್​ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಗಂಭೀರ ಗಾಯಗೊಂಡಿದ್ದ ಚೇತನ್​ ಆಸ್ಪತ್ರೆಗೆ ಸೇರಿಸುವ ಮುನ್ನವೇ ಸಾವನ್ನಪ್ಪಿದ್ದಾರೆ. ಅವರೊಡನೆ ಇದ್ದ ಕಾರು ಚಾಲಕ  ಶಿವು ಎಂಬುವವರಿಗೂ ಕೂಡ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಕಾರಿನ ಮುಂಬಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು