shivamogga news today : ರಸ್ತೆಯಲ್ಲಿ ನಿಲ್ಲಿಸಿದ್ದ ಗೂಡ್ಸ್ ವಾಹನಕ್ಕೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯ ಪಿಳ್ಳಂಗೆರೆ ಗ್ರಾಮದಲ್ಲಿ ನಡೆದಿದೆ.
ಭದ್ರಾವತಿ ತಾಲೂಕಿನ ಹನುಮಂತಾಪುರ ಗ್ರಾಮದ ನಿವಾಸಿ ಚೇತನ್ ಹೆಚ್.ಪಿ (36) ಮೃತ ದುರ್ದೈವಿ.
shivamogga news today : ಹೇಗಾಯ್ತು ಘಟನೆ
ಫೋಟೋಗ್ರಾಫರ್ ಕೆಲಸ ಮಾಡಿಕೊಂಡಿದ್ದ ಮೃತ ಚೇತನ್ ತನ್ನ ಸ್ನೇಹಿತನೊಂದಿಗೆ ಶಿವಮೊಗ್ಗಕ್ಕೆ ಹೋಗಿದ್ದರು. ಅಲ್ಲಿಂದ ವಾಪಸ್ ಬರುವಾಗ ಶಿವಮೊಗ್ಗ- ಹೊಳೆಹೊನ್ನೂರು ರಸ್ತೆಯ ಪಿಳ್ಳಂಗೆರೆ ಬಳಿಯಲ್ಲಿ ನಿಲ್ಲಿಸಿದ್ದ ಗೂಡ್ಸ್ ವಾಹನಕ್ಕೆ ಚೇತನ್ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಗಂಭೀರ ಗಾಯಗೊಂಡಿದ್ದ ಚೇತನ್ ಆಸ್ಪತ್ರೆಗೆ ಸೇರಿಸುವ ಮುನ್ನವೇ ಸಾವನ್ನಪ್ಪಿದ್ದಾರೆ. ಅವರೊಡನೆ ಇದ್ದ ಕಾರು ಚಾಲಕ ಶಿವು ಎಂಬುವವರಿಗೂ ಕೂಡ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಕಾರಿನ ಮುಂಬಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ