shivamogga news : ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ಆರೋಪಿಗಳಿಗೆ 4 ವರ್ಷ ಜೈಲು ಶಿಕ್ಷೆ, 25 ಸಾವಿರ ದಂಡ 

prathapa thirthahalli
Prathapa thirthahalli - content producer

shivamogga news : ಶಿವಮೊಗ್ಗ : ಅಕ್ರಮವಾಗಿ ದ್ವಿಚಕ್ರ ವಾಹನದಲ್ಲಿ  ಗಾಂಜಾ ಸಾಗಿಸುತ್ತಿದ್ದ ಆರೋಪಿಗಳ ಮೇಲಿನ ಆರೋಪ ದೃಢಪಟ್ಟ ಹಿನ್ನೆಲೆ ಅಪರಾಧಿಗಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 4 ವರ್ಷಗಳ ಸಾಮಾನ್ಯ ಕಾರಾಗೃಹ ಸಜೆ ಮತ್ತು ರೂ.25 ಸಾವಿರ ದಂಡ ವಿಧಿಸಿ, ತೀರ್ಪು ನೀಡಿ ಆದೇಶಿಸಿದೆ.

shivamogga news : ಏನಿದು ಪ್ರಕರಣ

ಜುಲೈ 07- 2021 ರಂದು ಲಕ್ಕಿನಕೊಪ್ಪ ಕಡೆಗೆ ಬರುವ ಸಾರ್ವಜನಿಕ ರಸ್ತೆಯಲ್ಲಿ ಬಜಾಜ್ ಪಲ್ಸರ್ ಬೈಕ್ ನಲ್ಲಿ  ಅಕ್ರಮವಾಗಿ ಆರೋಪಿಗಳು ಗಾಂಜಾವನ್ನು ಮಾರಾಟ ಮಾಡುತ್ತಿದ್ದರು.  ಪೊಲೀಸರು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿತರು ಸಾಗಾಣಿಕೆ ಮಾಡುತ್ತಿದ್ದ 3 ಕೆಜಿ 380 ಗ್ರಾಂ ತೂಕದ ಒಣ ಗಾಂಜಾವನ್ನು ವಶಪಡಿಸಿಕೊಂಡಿದ್ದರು. ಹಾಗೆಯೇ ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳಾದ   ಜೀವನ್ ಎಂ, ಸರೋನ ಎಂ, ಜೀವನ್ ಕೆ, ನಿತಿನ್ ಎಸ್, ಮುರುಗ ಎಲ್, ಇವರ ವಿರುದ್ದ ಪ್ರಕರಣ ದಾಖಲಿಸಿ, ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣವು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಇನ್ನಿತರ ಪೂರಕ ಸಾಕ್ಷ್ಯಾಧಾರಗಳ  ಆಧಾರದ ಮೇಲೆ ಹಾಗೂ ಸರ್ಕಾರದ ಪರ ವಕೀಲರು ಮಂಡಿಸಿದ ವಾದವನ್ನು ನ್ಯಾಯಾಲಯವು ಪುರಸ್ಕರಿಸಿ, ಆರೋಪಿಗಳ ಮೇಲಿನ ಆರೋಪ ದೃಢಪಟ್ಟಿದ್ದರಿಂದ ಆರೋಪಿಗಳಿಗೆ 4 ವರ್ಷಗಳ ಸಾಮಾನ್ಯ ಕಾರಾಗೃಹ ವಾಸ ಸಜೆ ಮತ್ತು ರೂ. 25 ಸಾವಿರ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. 

Share This Article