SHIVAMOGGA NEWS TODAY

ಶಿವಮೊಗ್ಗ: ಎನ್.ಟಿ ರಸ್ತೆಯಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಸಾವು, 

Prathapa thirthahalli ನವೀಕರಣ: 26 ಮಾರ್ಚ್ 2026, 4:22 ಅಪರಾಹ್ನ ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Shivamogga ಶಿವಮೊಗ್ಗ: ನಗರದ ಎನ್.ಟಿ ರಸ್ತೆಯ ಟೆಂಪೋ ಸ್ಟ್ಯಾಂಡ್ ಬಳಿ ಇಂದು ಎರಡು ದ್ವಿಚಕ್ರ ವಾಹನಗಳ ನಡುವೆ ಬೀಕರ ಅಪಘಾತ ಸಂಭವಿಸಿದ ಪರಿಣಾಮ  ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಸವಾರ ತೀವ್ರವಾಗಿ ಗಾಯಗೊಂಡಿದ್ದಾರೆ.

ಶಿವಮೊಗ್ಗ : ಅಸಲಿಗೆ ಅಡಿಕೆ ರೇಟು ಕರೆಕ್ಟ್​ ಆಗಿ ಎಷ್ಟಿದೆ!? ಏನಾಗ್ತಿದೆ? 

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಆರ್.ಎಂ.ಎಲ್ ನಗರದ 3ನೇ ಕ್ರಾಸ್ ನಿವಾಸಿ ಗುರುರಾಜ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಬೈಕ್‌ನಲ್ಲಿ ಆರ್.ಎಂ.ಎಲ್ ನಗರದ ಕಡೆಗೆ ತಿರುವು ಪಡೆಯುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ವೇಗವಾಗಿ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದ ಗುರುರಾಜ್ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನೊಂದು ಬೈಕ್ ಸವಾರ, ಹೊಳೆಹೊನ್ನೂರು ನಿವಾಸಿ ಮುರಳಿ ಎಂಬುವವರಿಗೂ ತೀವ್ರ ಗಾಯಗಳಾಗಿವೆ. ಅಪಘಾತದ ತೀವ್ರತೆಯಿಂದಾಗಿ ಅವರನ್ನು ತಕ್ಷಣವೇಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರಿಂದ ಸದ್ಯ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shivamogga One Dead in NT Road Bike Collision

Shivamogga One Dead in NT Road Bike Collision
Shivamogga One Dead in NT Road Bike Collision
shivamogga car decor sun control house
car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.