ಶಿವಮೊಗ್ಗ ನಗರದ ಪೇಸ್ ಪಿ.ಯು ಕಾಲೇಜು 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ರಲ್ಲಿ ಒಟ್ಟಾರೆ ಶೇಕಡಾ 99.42 ರಷ್ಟು ಫಲಿತಾಂಶವನ್ನು ದಾಖಲಿಸಿದೆ. ಈ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 697 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 479 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಹಾಗೆಯೇ 210 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 04 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಕಾಲೇಜಿನ ವಿದ್ಯಾರ್ಥಿನಿ ಮಹೀನ್ ಖಾನಮ್ ಅಫ್ರಿದಿ ಅವರು ಒಟ್ಟು 600 ಅಂಕಗಳಿಗೆ 596 ಅಂಕಗಳನ್ನು ಗಳಿಸಿದ್ದಾರೆ. ಇವರೊಂದಿಗೆ ಸಾಧ್ವಿ ಎಂ.ಎಸ್ ಅವರು 594 ಅಂಕಿತ್ ಯು.ವಿ ಅವರು 589 ಅಂಕಗಳು, ಸಿಂಚನಾ ಪಿ.ಓ ಅವರು 589 ಅಂಕಗಳು ಮತ್ತು ಧೃತಿ ಹೆಚ್ ಭಟ್ ಅವರು 589 ಅಂಕಗಳನ್ನು ಪಡೆಯುವ ಮೂಲಕ ಸಾಧನೆ ಮೆರೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಟ್ರಸ್ಟಿಗಳು, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.