ಸಿ.ಟಿ. ರವಿ ಅವರನ್ನು ತಕ್ಷಣವೇ ಎಂಎಲ್‌ಸಿ ಹುದ್ದೆಯಿಂದ ವಜಾಗೊಳಿಸಿ: ಶಿವಮೊಗ್ಗ ಪೀಸ್ ಆರ್ಗನೈಸೇಷನ್ ಆಗ್ರಹ!

ಹಂಚಿಕೊಳ್ಳಿ
WhatsApp Facebook X Telegram
Shivamogga Peace Organisation
Shivamogga Peace Organisation

Shivamogga Peace Organisation ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಪ್ರಭಾವಿ ರಾಜಕೀಯ ನಾಯಕರು ಸಾರ್ವಜನಿಕ ವೇದಿಕೆಗಳಲ್ಲಿ ನೀಡುತ್ತಿರುವ ಧರ್ಮಾಧಾರಿತ ಹಾಗೂ ಪ್ರಚೋದನಕಾರಿ ಹೇಳಿಕೆಗಳು ದೇಶದ ಸಾಮರಸ್ಯಕ್ಕೆ ಗಂಭೀರ ಬೆದರಿಕೆಯೊಡ್ಡುತ್ತಿವೆ ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ಸಿ.ಟಿ. ರವಿ ಅವರನ್ನು ವಿಧಾನ ಪರಿಷತ್ ಸದಸ್ಯತ್ವದಿಂದ ತಕ್ಷಣವೇ ಉಚ್ಚಾಟಿಸಬೇಕು ಎಂದು  ಶಿವಮೊಗ್ಗ ಪೀಸ್ ಆರ್ಗನೈಸೇಷನ್ ಕಳವಳ ವ್ಯಕ್ತಪಡಿಸಿದೆ.  

indian post office : ತೀರ್ಥಹಳ್ಳಿ ಹಾಗೂ ಶಿವಮೊಗ್ಗ ವ್ಯಾಪ್ತಿಯ ಅಂಚೆ ಕಚೇರಿಗಳ ವಹಿವಾಟು ತಾತ್ಕಾಲಿಕ ಸ್ಥಗಿತ | ಕಾರಣವೇನು

ನಗರದ  ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಂಘಟನೆಯ ಅಧ್ಯಕ್ಷ ರಿಯಾಜ್ ಅಹಮದ್, ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಮಾಜಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸೇರಿದಂತೆ ಹಲವು ಕೇಂದ್ರ ನಾಯಕರ ಇತ್ತೀಚಿನ ಹೇಳಿಕೆಗಳು ಮುಸ್ಲಿಂ ಸಮುದಾಯ ಹಾಗೂ ಜವಾಬ್ದಾರಿಯುತ ನಾಗರಿಕರಲ್ಲಿ ತೀವ್ರ ನೋವು ಮತ್ತು ಆತಂಕವನ್ನುಂಟು ಮಾಡಿವೆ ಎಂದರು. ಇಂತಹ ದ್ವೇಷಪೂರಿತ ಮಾತುಗಳು ಸಮಾಜದಲ್ಲಿ ಸೌಹಾರ್ದತೆಯನ್ನು ಕದಡಿ ಉದ್ವಿಗ್ನತೆಗೆ ದಾರಿ ಮಾಡಿಕೊಡಲಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಭಾರತವು ಸಮಾನತೆ, ಸಹಬಾಳ್ವೆ ಮತ್ತು ಧಾರ್ಮಿಕ ಸ್ವಾತಂತ್ರ್ಯದಂತಹ ಸಂವಿಧಾನಾತ್ಮಕ ಮೌಲ್ಯಗಳ ಮೇಲೆ ನಿಂತಿರುವ ಬಲಿಷ್ಠ ರಾಷ್ಟ್ರವಾಗಿದೆ. ಜನರನ್ನು ಒಗ್ಗೂಡಿಸಬೇಕಾದ ರಾಜಕಾರಣಿಗಳು ಯಾವುದೇ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ವಿಭಜಕ ಭಾಷೆ ಬಳಸುವುದು ಸರಿಯಲ್ಲ. ಈ ವಿಚಾರವಾಗಿ ಸಂಬಂಧಪಟ್ಟವರು ಸ್ಪಷ್ಟ ನಿಲುವು ತಳೆದು, ಸಿ.ಟಿ. ರವಿ ವಿರುದ್ಧ ಕಠಿಣ ಶಿಸ್ತುಕ್ರಮ ಕೈಗೊಳ್ಳಬೇಕು ಹಾಗೂ ಅವರ ಎಂಎಲ್‌ಸಿ ಹುದ್ದೆಯನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು. 

ಧರ್ಮ, ಜಾತಿ ಅಥವಾ ಭಾಷೆಯ ಹೆಸರಿನಲ್ಲಿ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಚಟುವಟಿಕೆಗಳನ್ನು ಸಂಪೂರ್ಣವಾಗಿ ತೊರೆಯಬೇಕು. ಭಾರತದ ಏಕತೆ ಮತ್ತು ಸೌಹಾರ್ದತೆಯನ್ನು ಎತ್ತಿಹಿಡಿಯುವ ಸಕಾರಾತ್ಮಕ ರಾಜಕಾರಣ ಇಂದಿನ ಅಗತ್ಯವಾಗಿದೆ ಎಂದು ರಿಯಾಜ್ ಅಹಮದ್ ಅಭಿಪ್ರಾಯಪಟ್ಟರು. 

ದ್ವೇಷದ ಭಾಷೆಯಿಂದ ಎಂದಿಗೂ ದೇಶವನ್ನು ಬಲಪಡಿಸಲು ಸಾಧ್ಯವಿಲ್ಲ. ಪ್ರೀತಿ, ಸೌಹಾರ್ದತೆ, ಪರಸ್ಪರ ಗೌರವ ಮತ್ತು ಸಂವಿಧಾನದ ಮೇಲಿನ ನಿಷ್ಠೆಯಷ್ಟೇ ಭಾರತವನ್ನು ಸದೃಢಗೊಳಿಸಲು ಸಾಧ್ಯ ಎಂದು ಹೇಳಿದರು.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor