21 ವರ್ಷದ ಯುವಕನಿಗೆ 20 ವರ್ಷ ಜೈಲು, 50 ಸಾವಿರ ದಂಡ! ಶಿವಮೊಗ್ಗ ಕೋರ್ಟ್ ಆದೇಶ

Shimoga : ತಾಲ್ಲೂಕಿನ ಠಾಣೆ ಒಂದರ ವ್ಯಾಪ್ತಿಯಲ್ಲಿ 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ 21 ವರ್ಷದ ಯುವಕನಿಗೆ ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಮಂಗಳವಾರ ಆದೇಶಿಸಿದೆ.

ದಂಡ ಪಾವತಿಸಲು ವಿಫಲವಾದಲ್ಲಿ ಮೂರು ವರ್ಷ ಹೆಚ್ಚುವರಿ ಸಾದಾ ಸೆರೆವಾಸ ಶಿಕ್ಷೆ ವಿಧಿಸಿದೆ. 2022ರಲ್ಲಿ ಈ  ಪ್ರಕರಣ ನಡೆದಿತ್ತು.  ಅಂದಿನ ಇನ್‌ಸ್ಪೆಕ್ಟ‌ರ್ ಅಭಯಪ್ರಕಾಶ್ ಸೋಮನಾಳ್‌ ತನಿಖೆ ನಡೆಸಿ ಫೋಕ್ಸೋ ಆಕ್ಟ್​ ಅಡಿಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಶಿವಮೊಗ್ಗ ಪೋಕ್ಸೋ ಪ್ರಕರಣ: ಕುಂಸಿ ಅತ್ಯಾಚಾರ ಆರೋಪಿಗೆ 20 ವರ್ಷ ಜೈಲು, Shivamogga POCSO Case Verdict 20 Years Jail for Accused in Kumsi Sexual Assault Case 
ಶಿವಮೊಗ್ಗ ಪೋಕ್ಸೋ ಪ್ರಕರಣ: ಕುಂಸಿ ಅತ್ಯಾಚಾರ ಆರೋಪಿಗೆ 20 ವರ್ಷ ಜೈಲು, Shivamogga POCSO Case Verdict 20 Years Jail for Accused in Sexual Assault Case

ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಧೀಶರಾದ ನಿಂಗನಗೌಡ ಪಾಟೀಲ ಇದೀಗ ವಿಚಾರಣೆ ಮುಗಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ  ಈ ಪ್ರಕರಣದ ಸಂತ್ರಸ್ತೆಯ ತಾಯಿಗೆ ₹4 ಲಕ್ಷ  ಪರಿಹಾರವಾಗಿ ನೀಡಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸೂಚಿಸಿದ್ದಾರೆ. ಇನ್ನೂ ಈ ಕೇಸ್​ನಲ್ಲಿ ಸರ್ಕಾರದ ಪರವಾಗಿ ವಕೀಲ ಶ್ರೀಧರ್ ವಾದ ಮಂಡಿಸಿದ್ದರು.

Narendra modi/ ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕುಂಸಿ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್ !

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebookwhatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epapermalenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು.

ಶಿವಮೊಗ್ಗ ಪೋಕ್ಸೋ ಪ್ರಕರಣ: ಕುಂಸಿ ಅತ್ಯಾಚಾರ ಆರೋಪಿಗೆ 20 ವರ್ಷ ಜೈಲು, Shivamogga POCSO Case Verdict 20 Years Jail for Accused in Sexual Assault Case