SHIMOGA NEWS LIVE

RX ಬೈಕ್​ನಲ್ಲಿ ಕಿರಿಕ್, ಪತಿಯ ತಮ್ಮನ ಗಲಾಟೆ, ವ್ಯಾನಿಟಿ ಬ್ಯಾಗಿನ ದುಡ್ಡು, ಕಾರು ಖರೀದಿ ಕೇಸ್! ಶಿವಮೊಗ್ಗ ಸುದ್ದಿಗಳು

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Shivamogga Police Action / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ಜಿಲ್ಲೆಯಾದ್ಯಂತ ನಡೆದ ವಿವಿಧ ಘಟನೆಗಳಿಗೆ ಸಂಬಂಧಿಸಿದ ಇವತ್ತಿನ ಸುದ್ದಿಯ ವಿವರ ಹೀಗಿದೆ . ಜೂನ್ 28, 2026 ರಂದು ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕರು ಆರ್ ಎಕ್ಸ್ ಬೈಕ್ ನಲ್ಲಿ ಅತಿ ವೇಗವಾಗಿ ಚಲಿಸುತ್ತಿದ್ದನ್ನು ಪ್ರಶ್ನಿಸಿದ ಸಾರ್ವಜನಿಕರ ಮೇಲೆ ಹಲ್ಲೆಗೆ ಮುಂದಾಗಿದ್ದರು ಈ ಸಂಬಂಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಇಆರ್ ವಿ ಸಿಬ್ಬಂದಿ ವಿಚಾರಣೆ ನಡೆಸಿ ಪ್ರಕರಣವನ್ನು ಇತ್ಯರ್ಥ ಪಡಿಸಿದ್ದಾರೆ.

ಇನ್ನೊಂದೆಡೆ ಜೂನ್ 28, 2026 ರಂದು ಭದ್ರಾವತಿಯ ಒಂದು ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು 112 ಗೆ ಕರೆ ಮಾಡಿ ತಮ್ಮ ಪತಿ ತೀರಿಕೊಂಡಿದ್ದು, ಅವರ ತಮ್ಮ ಮನೆ ಬಳಿ ಬಂದು ಗಲಾಟೆ ಮಾಡಿ ತೊಂದರೆ ನೀಡುತ್ತಿದ್ದಾರೆ ಎಂದು ದೂರಿದ್ದರು. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಸಿಬ್ಬಂದಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆರೋಪಿ ಸ್ಥಳದಲ್ಲಿರದ ಕಾರಣ, ದೂರು ನೀಡಲು ಸಂತ್ರಸ್ತೆಗೆ ತಿಳಿಸಿದ್ದಾರೆ. ವಿಷಯವನ್ನು ಠಾಣೆಗೆ ವರ್ಗಾವಣೆ ಮಾಡಿದ್ದಾರೆ.

ಇತ್ತ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಾನಿಟಿ ಬ್ಯಾಗ್ ನಲ್ಲಿ ಇಟ್ಟಿದ್ದ 30000 ರೂಪಾಯಿಗಳ ಪೈಕಿ 20000 ರೂಪಾಯಿ ಕಳವಾದ ಬಗ್ಗೆ ವರದಿಯಾಗಿದೆ ತಮ್ಮ ಬಳಿ ಇದ್ದ ವ್ಯಾನಿಟಿ ಬ್ಯಾಗ್​ನಲ್ಲಿದ್ದ 20 ಸಾವಿರ ರೂಪಾಯಿ ಕಳುವಾಗಿದೆ ಅಂಥಾ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿ ದೂರು ಪಡೆದು ವಿಚಾರಣೆ ನಡೆಸಿದ್ದಾರೆ.

ಇನ್ನೊಂದೆಡೆ ತುಂಗಾನಗರ ಪೊಲೀಸ್ ಠಾಣಣೆ ವ್ಯಾಪ್ತಿಯಲ್ಲಿ ಕಾರು ಖರೀದಿಸಿದ ವ್ಯಕ್ತಿ ಹಣ ನೀಡದೆ ಗಲಾಟೆ ಮಾಡುತ್ತಿರುವ ಬಗ್ಗೆಯೂ ಪೊಲೀಸರಿಗೆ ದೂರು ಬಂದಿತ್ತು. ಈ ಸಂಬಂಧ ಸ್ಥಳಕ್ಕೆ ಆಗಮಿಸಿದ ಇಆರ್ ವಿ ಸಿಬ್ಬಂದಿ ಗಲಾಟೆ ಬಿಡಿಸಿ ಸೂಕ್ತ ತಿಳುವಳಿಕೆ ನೀಡಿದರು. ಆದರೆ ಇಬ್ಬರೂ ಕೇಳದಿದ್ದಾಗ, ಠಾಣೆಗೆ ಬಂದು ದೂರು ನೀಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಂತೆ ಸೂಚನೆ ನೀಡಿದ್ರು.

ನಿಮ್ಮ ವಾಟ್ಸಾಪ್​ಗೆ ಸುದ್ದಿ ಕಳುಹಿಸಲು ಕ್ಲಿಕ್​ ಮಾಡಿ ಗ್ರೂಪ್​ಗೆ ಜಾಯಿನ್ ಆಗಿ :  Whatsapp / https://chat.whatsapp.com/JrsZ8He4nN600n0r3tJItz

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ