ಶಿವಮೊಗ್ಗ: ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

prathapa thirthahalli
Prathapa thirthahalli - content producer

ಶಿವಮೊಗ್ಗ : ನಗರದ ಲಕ್ಷ್ಮಿಪುರದಿಂದ ಶ್ರೀರಾಂಪುರಕ್ಕೆ ಹೋಗುವ ರಿಂಗ್ ರಸ್ತೆಯಲ್ಲಿ ಸ್ಕಾರ್ಪಿಯೋ ವಾಹನವನ್ನು ಬಳಸಿಕೊಂಡು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಾಹಿದ್ ಖಾನ್ (37) ಮತ್ತು ಮಹಮ್ಮದ್ ಜಾಫರ್ (23) ಎಂದು ಗುರುತಿಸಲಾಗಿದೆ.

ಹೋಯ್ ತೀರ್ಥಳ್ಳಿ ಎಳ್ಳಮಾಸ್ಯೆ ಜಾತ್ರೆ ಯಾವಗಂತೋ! 

shivamogga Police Arrest Two for Selling Ganja 
shivamogga Police Arrest Two for Selling Ganja

ನವೆಂಬರ್ 24 ರಂದು, ರಿಂಗ್ ರಸ್ತೆಯಲ್ಲಿ ಸ್ಕಾರ್ಪಿಯೋ ವಾಹನದಲ್ಲಿ ಇಬ್ಬರು ವ್ಯಕ್ತಿಗಳು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ತುಂಗಾ ನಗರ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಆಧಾರದ ಮೇಲೆ, ಪೊಲೀಸರು ತಕ್ಷಣವೇ ಕಾರ್ಯಾಚರಣೆ ನಡೆಸಿ ದಾಳಿ ಮಾಡಿದರು ಮತ್ತು ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡರು.

ಆರೋಪಿಗಳಿಂದ ಒಟ್ಟು 1 ಕೆ.ಜಿ 420 ಗ್ರಾಂ ಗಾಂಜಾ ಮತ್ತು 24 ಗ್ರಾಂನಷ್ಟು ಇತರೆ ಮಾದಕ ವಸ್ತುವಿನ (ಡ್ರಗ್ಸ್) ಜೊತೆಗೆ ಕೃತ್ಯಕ್ಕೆ ಬಳಸಿದ್ದ ಸ್ಕಾರ್ಪಿಯೋ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ: 708/2025 ರ ಅಡಿಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯ ಕಲಂ 8(ಸಿ), 20(b)(ii)(B), ಮತ್ತು 22(b) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

shivamogga Police Arrest Two for Selling Ganja 

shivamogga Police Arrest Two for Selling Ganja 

Share This Article