ಕಳ್ತನ ಮತ್ತು ಪೋಕ್ಸೋ! 2 ಪ್ರತ್ಯೇಕ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಅರೆಸ್ಟ್!

ಹಂಚಿಕೊಳ್ಳಿ
WhatsApp Facebook X Telegram
ಕಳ್ತನ ಮತ್ತು ಪೋಕ್ಸೋ! 2 ಪ್ರತ್ಯೇಕ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಅರೆಸ್ಟ್!

Shivamogga Police / ಮಲೆನಾಡು ಟುಡೆ ಸುದ್ದಿ | ಶಿವಮೊಗ್ಗ | ಜಿಲ್ಲಾ ಪೊಲೀಸ್ ಇಲಾಖೆ ಸೈಲೆಂಟ್ ಆಗಿ ವಾರಂಟ್ ಆಸಾಮಿಗಳ ಬೆನ್ನು ಬಿದ್ದಿದೆ. ಇದಕ್ಕೆ ಪೂರಕವಾಗಿ ವಿವಿಧ ಠಾಣೆಗಳ ಹಳೆಯ ಪ್ರಕರಣಗಳಲ್ಲಿ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯೊಳಗೆ 2019ರಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯ ವಿರುದ್ಧ ಕುಂಸಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳಿಂದ ರಕ್ಷಣೆ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ಹಾಜರಾಗದ ಆರೋಪಿ ತಲೆಮರೆಸಿಕೊಂಡಿದ್ದ. ಇದೀಗ ಈತನನ್ನು ಪತ್ತೆ ಮಾಡಿ ಪೊಲೀಸರು ಕೋರ್ಟ್​ಗೆ ಪ್ರೊಡ್ಯೂಸ್ ಮಾಡಿದ್ದಾರೆ.

ಇನ್ನೊಂದೆಡೆ, ತುಂಗಾನಗರ ಪೊಲೀಸ್ ಠಾಣೆ ಲಿಮಿಟ್ಸ್​ನಲ್ಲಿ ಕಳವು ಪ್ರಕರಣದಲ್ಲಿ ಸುಮಾರು 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನೂ ಬಂಧಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ ಕಲಂ 454, 457 ಹಾಗೂ 380ರಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ವಾರಂಟ್ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor