ಶಿವಮೊಗ್ಗ: ರೈತರ ಪ್ರತಿಭಟನೆ ವೇಳೆ ಡಿವೈಡರ್ ಒಡೆದು ಟ್ರ್ಯಾಕ್ಟರ್ ದಾಟಿಸಿದ ಪ್ರಕರಣ! ಜಯನಗರ ಠಾಣೆಯಲ್ಲಿ ಚಾಲಕನ ವಿರುದ್ಧ ಕೇಸ್​

ಹಂಚಿಕೊಳ್ಳಿ
WhatsApp Facebook X Telegram
Shivamogga Police Book Tractor Driver Over Divider Damage During Farmers’ Protest
Shivamogga Police Book Tractor Driver Over Divider Damage During Farmers’ Protest

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಭದ್ರಾ ಜಲಾಶಯದ ಬಲದಂಡೆ ಮತ್ತು ಎಡದಂಡೆ ನಾಲೆಗಳಿಗೆ ತಿಂಗಳಿಗೆ 20 ದಿನ ನೀರು ಹರಿಸುವಂತೆ ಆಗ್ರಹಿಸಿ ನವೆಂಬರ್ 25ರಂದು ನಡೆದ ರೈತರ ಪ್ರತಿಭಟನೆ ವೇಳೆ ರಸ್ತೆ ವಿಭಜಕಕ್ಕೆ ಟ್ರ್ಯಾಕ್ಟರ್ ಹತ್ತಿಸಿ ಹಾನಿ ಮಾಡಿದ ಆರೋಪದಡಿ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಪಕ್ಕದ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಟ್ರ್ಯಾಕ್ಟರ್ ಹಾಗೂ ಅದರ ಚಾಲಕನ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.

ರೈತ ಮುಖಂಡ ಕೆ.ಟಿ. ಗಂಗಾಧರ ಅವರ ನೇತೃತ್ವದಲ್ಲಿ 2,000 ರೈತರು 100 ಟ್ರ್ಯಾಕ್ಟರ್‌ಗಳಲ್ಲಿ ಪುರಲೆ ಗ್ರಾಮದಿಂದ ಮೆರವಣಿಗೆ ಹೊರಟು, ನಗರದ ಪ್ರಮುಖ ವೃತ್ತಗಳ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬಂದು ಮುತ್ತಿಗೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಮತ್ತು ಸುತ್ತಮುತ್ತಲಿನ ಆಯಕಟ್ಟಿನ ಸ್ಥಳಗಳಲ್ಲಿ ಜಯನಗರ ಸೇರಿದಂತೆ ಇತರ ಪೊಲೀಸ್ ಠಾಣೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗಿತ್ತು

ಆನಂತರ ಮಧ್ಯಾಹ್ನ ರೈತರು ತಾವು ತಂದಿದ್ದ ಟ್ರ್ಯಾಕ್ಟರ್‌ಗಳು ಹಾಗೂ ಇತರ ವಾಹನಗಳನ್ನು ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ನುಗ್ಗಿಸಲು ಯತ್ನಿಸಿದ್ದರು. ಈ ವೇಳೆ ರಿಜಿಸ್ಟ್ರೇಷನ್ ನಂಬರ್ ಇರದ ನೀಲಿ ಬಣ್ಣದ ಸೋನಾಲಿಕಾ ಟ್ರ್ಯಾಕ್ಟರನ್ನ ಒಬ್ಬಾತ ಚಾಲಕ ಡಿವೈಡರ್ ಮೇಲೆ ಹತ್ತಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದರಿಂದ ಡಿವೈಡರ್ ಕಟ್ಟೆ ಹಾಗೂ ಅದರ ಮೇಲಿದ್ದ ಕಬ್ಬಿಣದ ಗ್ರಿಲ್ ಮುರಿದು ಸರ್ಕಾರಿ ಸ್ವತ್ತಿಗೆ ಹಾನಿಯಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಬಂದೋಬಸ್ತ್ ಉಸ್ತುವಾರಿ ವಹಿಸಿದ್ದ ಜಯನಗರ ಪೊಲೀಸ್ ಇನ್‌ಸ್ಪೆಕ್ಟರ್ ರವಿ ಪಾಟೀಲ್ ಈ ಸಂಬಂಧ ದೂರು ನಿಡಿದ್ದು ಜಯನಗರ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆ, 2023ರ ಕಲಂ 324(4) ಮತ್ತು ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆ, 1984ರ ಕಲಂ 3(1) ಅಡಿ ತನಿಖೆ ಕೈಗೊಳ್ಳಲಾಗಿದೆ.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor