ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಮುಂಬರುವ ಗೌರಿ-ಗಣೇಶ ಹಬ್ಬದ ಬಂದೋಬಸ್ತ್ ಸಂದರ್ಭದಲ್ಲಿ (Gowri Ganesha Festival Bandobast 2026) ಪೊಲೀಸ್ ಇಲಾಖೆಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಸಾರ್ವಜನಿಕರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಅವಕಾಶ ಕಲ್ಪಿಸಿದೆ. ಈ ಸಂಬಂಧ ಪ್ರಕಟಣೆಯನ್ನ ಸಹ ನೀಡಿದ್ದು, ಅದರಲ್ಲಿನ ವಿವರವನ್ನ ಗಮನಿಸುವುದಾದರೆ, ಹಬ್ಬದ ಬಂದೋಬಸ್ತ್ ಕಾರ್ಯಗಳಲ್ಲಿ ಸಾರ್ವಜನಿಕರು ಸ್ವಯಂ ಸೇವಕರಾಗಿ ಪೊಲೀಸ್ ಇಲಾಖೆಯೊಂದಿಗೆ ಕರ್ತವ್ಯ ನಿರ್ವಹಿಸಬಹುದಾಗಿದ್ದು, ಅಪರಾಧಿಕ ಹಿನ್ನೆಲೆ ಇಲ್ಲದವರು ಇದಕ್ಕಾಗಿ ನೋಂದಣಿ ಮಾಡಿಕೊಳ್ಳಬಹುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.
- ಆಸಕ್ತ ಸಾರ್ವಜನಿಕರು 05-09-2026ರಿಂದ 14-09-2026ರವರೆಗೆ ತಮ್ಮ ವಿವರಗಳನ್ನು ಸಂಬಂಧಪಟ್ಟ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದಾಗಿದೆ.
- ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ತಾಲೂಕಿನ ಸಾರ್ವಜನಿಕರು ಶಿವಮೊಗ್ಗ-ಎ ಉಪವಿಭಾಗದಲ್ಲಿ, ಭದ್ರಾವತಿ ತಾಲೂಕಿನವರು ಭದ್ರಾವತಿ ಉಪವಿಭಾಗದಲ್ಲಿ, ಸೊರಬ ಹಾಗೂ ಶಿಕಾರಿಪುರ ತಾಲೂಕಿನವರು ಶಿಕಾರಿಪುರ ಉಪವಿಭಾಗದಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು.
- ತೀರ್ಥಹಳ್ಳಿ ಮತ್ತು ಹೊಸನಗರ ತಾಲೂಕಿನ ಆಸಕ್ತರು ತೀರ್ಥಹಳ್ಳಿ ಉಪವಿಭಾಗದಲ್ಲಿ ಹಾಗೂ ಸಾಗರ ತಾಲೂಕಿನ ಸಾರ್ವಜನಿಕರು ಸಾಗರ ಉಪವಿಭಾಗದಲ್ಲಿ ತಮ್ಮ ವಿವರಗಳನ್ನು ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಗೌರಿ-ಗಣೇಶ ಹಬ್ಬದ ಬಂದೋಬಸ್ತ್ ವೇಳೆ ಪೊಲೀಸ್ ಇಲಾಖೆಯೊಂದಿಗೆ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಬಯಸುವವರು ನಿಗದಿತ ಅವಧಿಯೊಳಗೆ ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ಪೊಲೀಸ್ ಉಪಾಧೀಕ್ಷಕರ ಕಚೇರಿಯನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ತಿಳಿಸಲಾಗಿದೆ.

