SHIMOGA NEWS LIVE

ಗೋಪಾಳದ ಗುಡ್ ಲಕ್ ಸರ್ಕಲ್ ಬಳಿಯ ಸ್ಪಾ ಮೇಲೆ ರೇಡ್! ಇಬ್ಬರ ರಕ್ಷಣೆ, ಓರ್ವ ವಶಕ್ಕೆ!

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

shivamogga police raid spa / ಮಲೆನಾಡು ಟುಡೆ / ಶಿವಮೊಗ್ಗ / ಸಿಟಿಯಲ್ಲಿ ಪೊಲೀಸರು ದಿಢೀರ್ ಎಂಬಂತೆ ಸ್ಪಾ ಒಂದರ ಮೇಲೆ ರೇಡ್ ಮಾಡಿದ್ದಾರೆ, ಈ ಕಾರ್ಯಾಚರಣೆಯಲ್ಲಿ ತುಂಗಾನಗರ ಪೊಲೀಸರು ಪಾಲ್ಗೊಂಡಿದ್ದಾರೆ.

ಲಭ್ಯವಾಗಿರುವ ಮಾಹಿತಿ ಪ್ರಕಾರ, ಸ್ಪಾವೊಂದರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತುಂಗಾನಗರ ಠಾಣೆ ಪೊಲೀಸರು ಸ್ಪೆಷಲ್ ಡ್ರೈವ್ ನಡೆಸಿ ದಾಳಿ ಮಾಡಿದ್ದಾರೆ.

ಶಿವಮೊಗ್ಗ ನಗರದ ಗುಡ್ ಲಕ್ ಸರ್ಕಲ್ ಬಳಿಯಿರುವ ರಾಯಲ್ ಸ್ಪಾ & ಫ್ಯಾಮಿಲಿ ಸಲೂನ್ ಮೇಲೆ ರೇಡ್ ನಡೆದಿದ್ದು, ಇಬ್ಬರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ ಎಂಬ ಮಾಹಿತಿಯಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಅಧಿಕಾರಿಗಳಿನ್ನೂ ದೃಢಪಡಿಸಬೇಕಿದೆ.

ಸ್ಪಾದಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಅಂತಾ ತಿಳಿದುಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಾ ಮಾಲೀಕರ ಬಂಧನ ಪ್ರಕ್ರಿಯೆ ನಡೆಯುತ್ತಿದೆ. ಈ ಸಂಬಂಧ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ಆಗಿದೆ.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ