ಹೋಳಿ ನೆಪದಲ್ಲಿ ಹುಚ್ಚಾಟ ಆಡಿದರೆ ಹುಷಾರ್​! 3 ವರ್ಷ ಜೈಲು ಗ್ಯಾರಂಟಿ

ಹಂಚಿಕೊಳ್ಳಿ
WhatsApp Facebook X Telegram
 B Nikhil IPS Takes Charge as Shivamogga SP
 B Nikhil IPS Takes Charge as Shivamogga SP

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಜಿಲ್ಲೆಯಲ್ಲಿಯು ಹೋಳಿ ಹಬ್ಬದ ಉತ್ಸಾಹ ಜೋರಾಗಿದೆ. ಒಂದೊಂದು ದಿನ ಒಂದೊಂದು ಕಡೆ ಆಯಾ ಸಂಪ್ರದಾಯದ ಪ್ರಕಾರ ಹೋಳಿ ಆಚರಿಸುವ ಶಿವಮೊಗ್ಗದಲ್ಲಿ ಪೊಲೀಸ್ ಇಲಾಖೆ ಪರೋಡಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಚ್ಚರಿಕೆಯನ್ನು ಸಹ ನೀಡಿದೆ. ಈ ನಿಟ್ಟಿನಲ್ಲಿ  ಹಬ್ಬ ಅಥವಾ ಯಾವುದೇ ಆಚರಣೆಗಳ ನೆಪದಲ್ಲಿ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. 

 Shivamogga police warning Holi celebration rules ,ಹೋಳಿ ಹಬ್ಬದ ಸಂಭ್ರಮ ಸಂಭ್ರಮದ ನಡುವೆ ಹೆಣ್ಣುಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ.
Shivamogga police warning Holi celebration rules ,ಹೋಳಿ ಹಬ್ಬದ ಸಂಭ್ರಮ ಸಂಭ್ರಮದ ನಡುವೆ ಹೆಣ್ಣುಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ.

ಭದ್ರಾವತಿ ಶಿವಮೊಗ್ಗ ಸಾಗರ, ಇವತ್ತಿನ ಕ್ರೈಂ ಸುದ್ದಿ!

ಸಾಲು ಸಾಲು ಹಬ್ಬಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಮಹಿಳೆಯರ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ ಪೊಲೀಸ್ ಇಲಾಖೆ ಜಾಗೃತಿಯ ಪೋಸ್ಟರ್​ ಪ್ರಕಟಿಸಿದ್ದು, ಅದರಲ್ಲಿ ಮಹಿಳೆಯರ ಜೊತೆಗೆ ಅನುಚಿತವಾಗಿ ವರ್ತಿಸಿದರೇ ಕಾನೂನು ಕ್ರಮ ಖಚಿತ ಎಂದು ತಿಳಿಸಲಾಗಿದೆ. 

ಹಬ್ಬದ ಸಂಭ್ರಮಾಚರಣೆಯ ನೆಪದಲ್ಲಿ ಬಣ್ಣ ಎರಚುವಾಗ ಅಥವಾ ಗುಂಪುಗಳಲ್ಲಿ ಸೇರುವಾಗ ಮಹಿಳೆಯರ ಅನುಮತಿ ಇಲ್ಲದೆ ಅವರೊಂದಿಗೆ ಅನುಚಿತವಾಗಿ ವರ್ತಿಸುವುದು, ಕಿಡಿಗೇಡಿತನ ತೋರುವುದು ಅಥವಾ ಮಹಿಳೆಯರಿಗೆ ಮುಜುಗರ ಉಂಟುಮಾಡುವುದು ಕಾನೂನುಬಾಹಿರ ಅಪರಾಧವಾಗಿದೆ. ಇಂತಹ ಕೃತ್ಯಗಳಲ್ಲಿ ಭಾಗಿಯಾಗುವ ವ್ಯಕ್ತಿಗಳ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಡಲಿದೆ 

ನಿಖಿಲ್ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ 

ಪೊಲೀಸ್ ಇಲಾಖೆಯ ಸೂಚನೆಗಳು

  • ಮಹಿಳೆಯರ ತೇಜೋವಧೆ ಮಾಡುವ ಅಥವಾ ಅವರ ಘನತೆಗೆ ಚ್ಯುತಿ ತರುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023 ರ ಸೆಕ್ಷನ್​ 79 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು. 
  • ಈ ಕಾಯ್ದೆಯನ್ವಯ ಆರೋಪ ಸಾಬೀತಾದರೆ ಅಪರಾಧಿಗೆ 3 ವರ್ಷಗಳವರೆಗೆ ಕಾರಾಗೃಹ ಶಿಕ್ಷೆ ಮತ್ತು ದಂಡವನ್ನು ವಿಧಿಸಲಾಗುತ್ತದೆ. 
  • ಸಾರ್ವಜನಿಕರು ಹಬ್ಬಗಳನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಬೇಕು, ಹೆಣ್ಣುಮಕ್ಕಳ ರಕ್ಷಣೆಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು.
  • ಯಾರಾದರೂ ಅಸಭ್ಯವಾಗಿ ವರ್ತಿಸಿದರೆ ತಕ್ಷಣವೇ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಶಿವಮೊಗ್ಗ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ

ಶಿವಮೊಗ್ಗ ,ಸಾಗರದಲ್ಲಿ ಅಡಿಕೆ ದರ ಏರಿಕೆ! ಉಳಿದೆಡೆ ಎಷ್ಟಿದೆ ಗಮನಿಸಿ ಅಡಿಕೆ ರೇಟು!

 Shivamogga police warning Holi celebration rules ,ಹೋಳಿ ಹಬ್ಬದ ಸಂಭ್ರಮ ಸಂಭ್ರಮದ ನಡುವೆ ಹೆಣ್ಣುಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ.
Shivamogga police warning Holi celebration rules ,ಹೋಳಿ ಹಬ್ಬದ ಸಂಭ್ರಮ ಸಂಭ್ರಮದ ನಡುವೆ ಹೆಣ್ಣುಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು.

ಸುದ್ದಿ ಟೈಟಲ್ : Shivamogga police warning Holi celebration rules ,ಹೋಳಿ ಹಬ್ಬದ ಸಂಭ್ರಮ ಸಂಭ್ರಮದ ನಡುವೆ ಹೆಣ್ಣುಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ.
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor