ಶಿವಮೊಗ್ಗ ಪೋಸ್ಟರ್ ವಾರ್‌ಗೆ ಬಿಜೆಪಿ ತಿರುಗೇಟು! ಯುವ ಕಾಂಗ್ರೆಸ್ ಹೆಸರಿನ ಪೋಸ್ಟರ್ ವಿರುದ್ಧ ಕಂಪ್ಲೆಂಟ್!

ಹಂಚಿಕೊಳ್ಳಿ
WhatsApp Facebook X Telegram
BJP District President Files Police Complaint Over Youth Congress Posters
BJP District President Files Police Complaint Over Youth Congress Posters
dasrara add shivamogga

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಇದೀಗ ಶಿವಮೊಗ್ಗ ಪೋಸ್ಟರ್ ವಾರ್ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ನಗರದ ದೀನದಯಾಳ್​ ರಸ್ತೆಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಹೆಸರಿನಲ್ಲಿ ಪೋಸ್ಟರ್‌ಗಳನ್ನು ಅಂಟಿಸಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಎನ್.ಕೆ. ಅವರು ಎಸ್​ಪಿಗೆ ದೂರು ಸಲ್ಲಿಸಿದ್ದಾರೆ. ಪೋಸ್ಟರ್ ಅಂಟಿಸಿದವರನ್ನು ಗುರುತಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

shivamogga dasara add
dasrara add shivamogga
dasrara add shivamogga

ಶಿವಮೊಗ್ಗ ಪೋಸ್ಟರ್ ವಾರ್‌ಗೆ ಬಿಜೆಪಿ ತಿರುಗೇಟು!

ಕಚೇರಿಯ ಬಾಗಿಲು ಹಾಗೂ ಪಕ್ಕದ ಗೋಡೆಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಬಿಜೆಪಿ ಪಕ್ಷವನ್ನು ಅವಹೇಳನ ಮಾಡುವಂತಹ ಪದಗಳನ್ನು ಒಳಗೊಂಡ ಬಣ್ಣದ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಪೋಸ್ಟರ್‌ಗಳಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಎಂಬ ಹೆಸರು ಮುದ್ರಿತವಾಗಿದೆ. ನವೆಂಬರ್ 7ರ ತಡರಾತ್ರಿ ಕಿಡಿಗೇಡಿಗಳು ಈ ಪೋಸ್ಟರ್‌ಗಳನ್ನು ಅಂಟಿಸಿರಬಹುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷರು ದೂರಿನಲ್ಲಿ ಅನುಮಾನ ವ್ಯಕ್ತಪಡಿಸಿದ್ದಾರೆ.

ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಬಿಜೆಪಿ ಕಾರ್ಯಕರ್ತರಿಗೆ ಈ ಘಟನೆ ಆಘಾತ ಉಂಟುಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಪಕ್ಷದ ವಿರುದ್ಧ ಏಕವಚನದ ಮತ್ತು ಅವಹೇಳನಕಾರಿ ಪದಗಳನ್ನು ಬಳಸಿರುವುದು ಕಾರ್ಯಕರ್ತರ ಮನಸ್ಸಿಗೆ ನೋವುಂಟುಮಾಡಿದೆ ಎಂದು ದೂರಿನಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿದೆ.

shivamogga dasara add

ರಾಜಕೀಯ ಪಕ್ಷಗಳ ನಡುವೆ ಭಿನ್ನಾಭಿಪ್ರಾಯಗಳಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಹಜ ಪ್ರಕ್ರಿಯೆಯಾಗಿದೆ. ಆದರೆ ಮತ್ತೊಂದು ರಾಜಕೀಯ ಪಕ್ಷದ ಕಚೇರಿಯ ಮುಂಭಾಗದಲ್ಲಿ ಈ ರೀತಿಯ ಪೋಸ್ಟರ್‌ಗಳನ್ನು ಅಂಟಿಸುವುದು ಅನುಚಿತ ವರ್ತನೆಯಾಗಿದೆ. ಇಂತಹ ಕೃತ್ಯಗಳು ರಾಜಕೀಯ ಸೌಹಾರ್ದತೆ ಹಾಗೂ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆಯಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರು ದೂರಿನಲ್ಲಿ ತಿಳಿಸಿದ್ದಾರೆ.

ಯಾವುದೇ ವ್ಯಕ್ತಿಯಾಗಲಿ ಅಥವಾ ರಾಜಕೀಯ ಪಕ್ಷವಾಗಲಿ ಕಾನೂನನ್ನು ಕೈಗೆತ್ತಿಕೊಳ್ಳಲು ಅವಕಾಶವಿಲ್ಲ. ಹೀಗಾಗಿ ಜಿಲ್ಲಾ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ಪೋಸ್ಟರ್‌ಗಳನ್ನು ಅಂಟಿಸಿರುವ ಘಟನೆಯನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಪೋಸ್ಟರ್ ಅಂಟಿಸಿರುವ ವ್ಯಕ್ತಿಗಳನ್ನು ಗುರುತಿಸುವುದರ ಜೊತೆಗೆ ಈ ಕೃತ್ಯದ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆಹಚ್ಚಬೇಕು. ಸಂಬಂಧಪಟ್ಟ ಸ್ಥಳಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಕೃತ್ಯದಲ್ಲಿ ಭಾಗಿಯಾಗಿರುವವರ ವಿರುದ್ಧ ಅನ್ವಯವಾಗುವ ಕಾನೂನು ಹಾಗೂ ನಿಯಮಗಳ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಹಬ್ಬದ ಆಚರಣೆಯ ನಡುವೆ ಪಕ್ಷದ ಕಾರ್ಯಕರ್ತರ ಮನಸ್ಸಿಗೆ ನೋವುಂಟುಮಾಡುವ ರೀತಿಯಲ್ಲಿ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ದೀಪಾವಳಿ ಹಬ್ಬದ ಸಂಭ್ರಮದ ಸಂದರ್ಭದಲ್ಲಿ ಇಂತಹ ಕೃತ್ಯ ಎಸಗಿರುವುದು ಖಂಡನೀಯ. ಅಲ್ಲದೆ, ರಾಜಕೀಯ ಪಕ್ಷಗಳ ಕಚೇರಿಗಳ ಮುಂಭಾಗದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲಾ ಬಿಜೆಪಿ ಕಚೇರಿಯ ಗೌರವ ಮತ್ತು ಭದ್ರತೆಯನ್ನು ಕಾಪಾಡುವುದರ ಜೊತೆಗೆ ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕ್ರಮ ವಹಿಸಬೇಕು

ಜಗದೀಶ್ ಎನ್.ಕೆ., ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರು

shivamogga dasara add
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor