ಶಿವಮೊಗ್ಗ: ನಾಳೆ ಆರ್.ಎಂ.ಎಲ್. ನಗರದ ಹಲವೆಡೆ ವಿದ್ಯುತ್ ವ್ಯತ್ಯಯ 

ಶಿವಮೊಗ್ಗ: ನಗರದ ಮೆಸ್ಕಾಂ ಉಪವಿಭಾಗ-2ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ನಾಳೆ (ಡಿಸೆಂಬರ್ 30) ನಗರದ ವಿವಿಧ ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

 ಶಿವಮೊಗ್ಗ : ಮನೆಯಂಗಳದಲ್ಲಿ ನಿಲ್ಲಿಸಿದ್ದ 18 ಲಕ್ಷದ ಎಕ್ಸ್‌ಯುವಿ 700 ನಾಪತ್ತೆ!

ಆರ್.ಎಂ.ಎಲ್. ನಗರದ ಘಟಕ 5ರ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ ಸಂಪರ್ಕ ಇರುವುದಿಲ್ಲ. 

Shivamogga Power Cut ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

ಆರ್.ಎಂ.ಎಲ್. ನಗರ 1 ಮತ್ತು 2ನೇ ಹಂತ, ಕಿದ್ವಾಯಿ ಶಾಲೆ ಸುತ್ತಮುತ್ತ, ಅನ್ಸರ್ ಮಸೀದಿ ರಸ್ತೆ, ಯುನಿಟಿ ಹಾಲ್ ಹಾಗೂ ಇವುಗಳ ಸಮೀಪದ ಪ್ರದೇಶಗಳಲ್ಲಿ ನಿಗದಿತ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ನಿರ್ವಹಣಾ ಕಾರ್ಯಕ್ಕೆ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.