ನಗರದ ಈ ಪ್ರದೇಶದಲ್ಲಿ ಮೂರು ದಿನ ವಿದ್ಯುತ್​ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut Shivamogga Power Cut Shimoga Power Cut Power Cut Alert
Shivamogga Power Cut Shimoga Power Cut Power Cut Alert

ಶಿವಮೊಗ್ಗ: ನಗರದ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಫೆಬ್ರವರಿ 19, 20 ಮತ್ತು 21 ರಂದು ಸತತ ಮೂರು ದಿನಗಳ ಕಾಲ ವಿವಿಧ ಬಡಾವಣೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಮೂರೂ ದಿನಗಳಂದು ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ ಸಂಪರ್ಕ ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಶಿವಮೊಗ್ಗ ಕೋಟೆ ಮಾರಿಕಾಂಬಾ ಜಾತ್ರೆಗೆ ಚಾಲನೆ: ಸಾರಾ ಹಾಕುವ ಮೂಲಕ ಆರಂಭವಾಯಿತು ಧಾರ್ಮಿಕ ವಿಧಿವಿಧಾನ

Shivamogga Power Cut ಎಲ್ಲೆಲ್ಲಿ ಕರೆಂಟ್​​ ಇರಲ್ಲ

ಕುವೆಂಪುನಗರದ ಸೂಡಾ ಸಿ ಮತ್ತು ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್, ಇನ್ಫ್ರಾ ಸಿಟಿ, ಮ್ಯಾಕ್ಸ್ ಲೇಔಟ್, ಎಂಇಎಸ್ ಲೇಔಟ್, ರೆಡ್ಡಿ ಲೇಔಟ್ ಹಾಗೂ ಸವಳಂಗ ರಸ್ತೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ. ಅಲ್ಲದೆ ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು ಹಾಗೂ ಕೃಷಿ ಕಾಲೇಜು ಆವರಣದಲ್ಲೂ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಮೀಣ ಭಾಗಗಳಾದ ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಹಳ್ಳಿ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ಗೋಂದಿ ಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಹಕರಿಗೆ ಈ ಅವಧಿಯಲ್ಲಿ ವಿದ್ಯುತ್ ಸೌಲಭ್ಯ ಲಭ್ಯವಿರುವುದಿಲ್ಲ.

Shivamogga Power Cut from Feb 19 to 21

Shivamogga Power Cut Power Cut Tomorrow Scheduled Power Cut Power Cut in Shivamogga Shimoga Power Cut Update
Shivamogga Power Cut
shivamogga car decor sun control house
shivamogga car decor sun control house
ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor