Shivamogga Power cut mescom / ವಿದ್ಯುತ್ ವ್ಯತ್ಯಯ: ಶಿವಮೊಗ್ಗ ನಗರದ ಹಲವೆಡೆ ನಾಳೆ ಮತ್ತು ನಾಡಿದ್ದು ಅಂದರೆ ಜೂನ್ 17 ಮತ್ತು 18 ರಂದು ವಿದ್ಯುತ್ ಕಡಿತವಾಗಲಿದೆ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ನಗರದ ಉಪವಿಭಾಗ-2ರ ವ್ಯಾಪ್ತಿಯಲ್ಲಿ ಬರುವ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದ ಅಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ಅವಶ್ಯಕ ನಿರ್ವಹಣಾ ಕಾರ್ಯಗಳನ್ನು ಕೈಗೆತ್ತಿಕೊಂಡಿರುವುದರಿಂದ, ಜೂನ್ 17 ಮತ್ತು 18 ರಂದು ಶಿವಮೊಗ್ಗದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಮಂಗಳವಾರ, ಜೂನ್ 17 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಗೋಪಿಶೆಟ್ಟಿಕೊಪ್ಪ, ಜಿ.ಎಸ್. ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯ ನಗರ, ಕೆಎಚ್‌ಬಿ ಕಾಲೊನಿ, ಮೇಲಿನ ತುಂಗಾನಗರ, ಸಲೀಮ್ ಫ್ಯಾಕ್ಟರಿ, ಹಳೇ ಗೋಪಿಶೆಟ್ಟಿಕೊಪ್ಪ, ಕಾಮತ್ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.
ಬುಧವಾರ, ಜೂನ್ 18 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹಳೇ ಮಂಡ್ಲಿ, ಗಂಧರ್ವನಗರ, ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ ಬಳಿ, ವಿಜಯವಾಣಿ ಪ್ರೆಸ್ ಹತ್ತಿರ, ಸವಾಯಿಪಾಳ್ಯ, ಕುರುಬರ ಪಾಳ್ಯ, ಇಲಿಯಾಸ್ ನಗರದ 1 ರಿಂದ 4ನೇ ಕ್ರಾಸ್, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ, ಎಫ್-5 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-8 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

- ಇಂದಿನ ಶಿವಮೊಗ್ಗದ ಸುದ್ದಿಗಳು: ನೋಡಲು ಕ್ಲಿಕ್ ಮಾಡಿ
- ಮೆಸ್ಕಾಂ (MESCOM) ಅಧಿಕೃತ ವೆಬ್‌ಸೈಟ್: MESCOM.in
- ಕರ್ನಾಟಕದ ಇಂಧನ ಇಲಾಖೆ: Energy.karnataka.gov.in
- ಸ್ಥಳೀಯ ವಿದ್ಯುತ್ ಸಮಸ್ಯೆಗಳ ಕುರಿತು ಮಲೆನಾಡು ಟುಡೇನಲ್ಲಿಯೂ ಓದಬಹುದು: Malenadutoday.com