ಶಿವಮೊಗ್ಗ | ಕುಂಸಿ, ಹಾರ್ನಳ್ಳಿ, ಕೋಣಂದೂರು ಸೇರಿದಂತೆ ಹಲವೆಡೆ ಇವತ್ತು ಕರೆಂಟ್ ಇರಲ್ಲ

ಹಂಚಿಕೊಳ್ಳಿ
WhatsApp Facebook X Telegram
Power Cutಸಾಂದರ್ಭಿಕ ಚಿತ್ರ
Power Cutಸಾಂದರ್ಭಿಕ ಚಿತ್ರ

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ನಿರ್ವಹಣೆ ಹಾಗೂ ವಿವಿಧ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನ ಕುಂಸಿ, ಹಾರ್ನಳ್ಳಿ ಹಾಗೂ ಕೋಣಂದೂರು ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.ಶಿವಮೊಗ್ಗ ತಾಲೂಕಿನ ಕುಂಸಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಕುಂಸಿ ಮತ್ತು ಹಾರ್ನಳ್ಳಿ ಶಾಖೆಗಳಲ್ಲಿ ಹಳೆಯ ಪವರ್ ಕೇಬಲ್ ಬದಲಾವಣೆ ಹಾಗೂ ಹೊಸ ಡಿ.ಪಿ. ಸ್ಟ್ರಕ್ಚರ್‌ಗಳ ಅಳವಡಿಕೆ ಕಾಮಗಾರಿ ಕೈಗೊಳ್ಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ವಿವಿಧ ಗ್ರಾಮಗಳ ನೀರಾವರಿ ಕೃಷಿ ಪಂಪ್‌ಸೆಟ್ ಗ್ರಾಹಕರಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ನವೆಂಬರ್ 26 ಮತ್ತು 27ರಂದು ನೀರಾವರಿ ಕೃಷಿ ಪಂಪ್‌ಸೆಟ್‌ಗಳಿಗೆ (ಐ.ಪಿ.) ಸಂಜೆ 6 ಗಂಟೆಯಿಂದ ಮರುದಿನ ಬೆಳಿಗ್ಗೆ 10 ಗಂಟೆಯವರೆಗೆ 3 ಫೇಸ್ ವಿದ್ಯುತ್ ಪೂರೈಸಲಾಗುತ್ತದೆ.ಸಾರ್ವಜನಿಕರು ಹಾಗೂ ಕೃಷಿಕರು ಈ ಬದಲಾವಣೆಯನ್ನು ಗಮನಿಸಿ ವಿದ್ಯುತ್ ಇಲಾಖೆಯೊಂದಿಗೆ ಸಹಕರಿಸುವಂತೆ ಮೆಸ್ಕಾಂ ಕುಂಸಿ ಪಾಲನೆ ಮತ್ತು ನಿರ್ವಹಣೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

ಕೋಣಂದೂರು ವ್ಯಾಪ್ತಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ

ಕೋಣಂದೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇಂದು (ನವೆಂಬರ್ 26) ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.ಕೋಣಂದೂರು, ದೇಮ್ಹಾಪುರ, ತ್ರಿಯಂಬಕಪುರ, ಗುಡ್ಡೆಕೊಪ್ಪ, ಹುಂಚದಕಟ್ಟೆ ಹಾಗೂ ಹಾದಿಗಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor