ಶಿವಮೊಗ್ಗದ ಈ ಗ್ರಾಮಗಳಲ್ಲಿ ನಾಳೆ 7 ಗಂಟೆ ಕರೆಂಟ್ ಇರಲ್ಲ ; ಮೆಸ್ಕಾಂ ಪ್ರಕಟಣೆ

ಹಂಚಿಕೊಳ್ಳಿ
WhatsApp Facebook X Telegram
Power Cutಸಾಂದರ್ಭಿಕ ಚಿತ್ರ
Power Cutಸಾಂದರ್ಭಿಕ ಚಿತ್ರ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗದ 110/11 ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 25ರ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿದ್ಯುತ್ ವಿತರಣಾ ಕೇಂದ್ರದ ಮಲ್ಲಾಡ್ ಆಸ್ಪತ್ರೆ, ಸೋಗಾನೆ ಹಾಗೂ ಹಸೂಡಿ ಮಾರ್ಗಗಳ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿ ನಡೆಯಲಿರುವುದರಿಂದ ಒಟ್ಟು 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೊನಿ, ಜಯಂತಿಗ್ರಾಮ, ಹೊನ್ನವಿಲೆ, ಕಾಲೊನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕರೆಂಟ್ ಇರಲ್ಲ.

ರಸ್ತೆ ವಿಸ್ತರಣೆ ಕಾಮಗಾರಿಯ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಂಬಂಧಪಟ್ಟ ಪ್ರದೇಶಗಳ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಮನವಿ ಮಾಡಿದೆ.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor