ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಗರದ ವಿವಿಧ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 23ರಂದು ವಿದ್ಯುತ್ ಕಂಬ ತೆರವು, ತುರ್ತು ನಿರ್ವಹಣೆ ಹಾಗೂ ವಿದ್ಯುತ್ ಪರಿವರ್ತಕ ಕೇಂದ್ರದ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಶಿವಮೊಗ್ಗ ವಿಭಾಗ ಮೂರು ಪ್ರತ್ಯೇಕ ಪ್ರಕಟಣೆಯನ್ನ ನೀಡಿದೆ. ಮಲೆನಾಡು ಟುಡೆಗೆ ಲಭ್ಯವಾದ ಪ್ರಕಟಣೆಯ ವಿವರದ ಪ್ರಕಾರ, ಮೆಸ್ಕಾಂ ಕಾಮಗಾರಿ ಹಿನ್ನೆಲೆಯಲ್ಲಿ ನಗರದ ಹಲವು ಬಡಾವಣೆಗಳು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕರೆಂಟ್ ಇರಲ್ಲ ಎಂದು ತಿಳಿಸಲಾಗಿದೆ.
ನಗರ ಉಪವಿಭಾಗ-1, ಘಟಕ-2, ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರ ಹಾಗೂ ನಗರ ಉಪವಿಭಾಗ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಪ್ರತ್ಯೇಕ ಕಾಮಗಾರಿಗಳು ನಡೆಯಲಿವೆ. ಈ ಭಾಗಗಳಲ್ಲಿ ಕರೆಂಟ್ ಕಟ್ ಆಗಲಿದ್ದು, ಪೂರ್ತಿ ವಿವರ ಗಮನಿಸುವುದಾಧರೆ, ಟ್ಯಾಂಕ್ ಮೊಹಲ್ಲಾ, ಬಾಪೂಜಿನಗರದಲ್ಲಿ ಬೆಳಗ್ಗೆ 10ರಿಂದ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಲಾಗಿದೆ.
ನಗರದ ವಿವಿದೆಡೆ ಕರೆಂಟ್ ಇರಲ್ಲ
ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ-2ರ ವ್ಯಾಪ್ತಿಯಲ್ಲಿ ಸೆ.23ರಂದು ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಟ್ಯಾಂಕ್ ಮೊಹಲ್ಲಾ, ಬಾಪೂಜಿನಗರ, ಸೋಮಯ್ಯ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಇನ್ನೂ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದ ಎ.ಎಫ್-3 ಮತ್ತು ಎ.ಎಫ್-4 ಫೀಡರ್ಗಳ ವ್ಯಾಪ್ತಿಯಲ್ಲಿ ಸೆ.23ರಂದು ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಕಾರಣದಿಂದ ಮಧ್ಯಾಹ್ನ 1 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಹಲವು ಬಡಾವಣೆಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ತಿಳಿಸಿದೆ. ಜಡ್ಜ್ ಕ್ವಾಟ್ರಸ್, ಎಸ್.ವಿ. ಬಡಾವಣೆಯ ಎ, ಬಿ ಮತ್ತು ಸಿ ಬ್ಲಾಕ್ಗಳು, ಪೊಲೀಸ್ ಲೇಔಟ್, ವೃದ್ಧಾಶ್ರಮದ ಸುತ್ತಮುತ್ತಲಿನ ಪ್ರದೇಶ, ಡಾಕ್ಟರ್ಸ್ ಲೇಔಟ್, ಅಯ್ಯಪ್ಪಸ್ವಾಮಿ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶ, ಗಾಡಿಕೊಪ್ಪ, ಮಲ್ಲಿಗೇನಹಳ್ಳಿ, ಸಾಗರ ರಸ್ತೆ, ನಂಜಪ್ಪ ಲೈಫ್ ಕೇರ್, ಮೈಸೂರು ಕೇರಿ, ವಾಜಪೇಯಿ ಬಡಾವಣೆ ಹಾಗೂ ಗಾಯತ್ರಿದೇವಿ ಲೇಔಟ್ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಈ ಪ್ರದೇಶಗಳ ಜೊತೆಗೆ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದ ಸಂಬಂಧಿತ ಫೀಡರ್ಗಳ ವ್ಯಾಪ್ತಿಗೆ ಬರುವ ಸುತ್ತಮುತ್ತಲಿನ ಗ್ರಾಮಗಳಲ್ಲಿಯೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ. ಶಿವಮೊಗ್ಗ ನಗರ ಉಪವಿಭಾಗ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆ.23ರಂದು ವಿದ್ಯುತ್ ಪರಿವರ್ತಕ ಕೇಂದ್ರಕ್ಕೆ ಸಂಬಂಧಿಸಿದ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3.30 ಗಂಟೆಯವರೆಗೆ ಕಾಮತ್ ಲೇಔಟ್, ತುಂಗಾನಗರ ಹಿಂಭಾಗ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
