ನಾಳೆ ನಾಡಿದ್ದು ಅಂದರೆ ಸೆ.5, 6ರಂದು ಶಿವಮೊಗ್ಗದ ಹಲವು ಕಡೆಗಳಲ್ಲಿ ಕರೆಂಟ್ ಇರಲ್ಲ! ಯಾವ ದಿನ ಎಲ್ಲೆಲ್ಲಿ ಕರೆಂಟ್ ಇರಲ್ಲ? ಇಲ್ಲಿದೆ ಮಾಹಿತಿ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut ಸಾಂದರ್ಭಿಕ ಚಿತ್ರ
Shivamogga Power Cut ಸಾಂದರ್ಭಿಕ ಚಿತ್ರ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ತಾಲೂಕಿನ ಗಾಜನೂರು ಗ್ರಾಮೀಣ ವಿದ್ಯುತ್ ವಿತರಣಾ ಕೇಂದ್ರ ಹಾಗೂ ನಗರದ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 5 ಮತ್ತು 6ರಂದು ಹಲವು ಗ್ರಾಮಗಳು ಹಾಗೂ ನಗರದ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ (Shivamogga Power Cut) ಎಂದು ಮೆಸ್ಕಾಂ ತಿಳಿಸಿದೆ.

ಸೆ.5ರಂದು ಈ ಗ್ರಾಮಗಳಲ್ಲಿ ವಿದ್ಯುತ್ ಇರಲ್ಲ

ಗಾಜನೂರು ಗ್ರಾಮೀಣ ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 5ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಕೇಂದ್ರದ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.

ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಹೊಸೂರು, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ಈಚಲವಾಡಿ, ಹಾಯ್ ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನಹಳ್ಳಿ, ಭೋವಿ ಕಾಲೊನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸೆ.6ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ನಗರ ಉಪವಿಭಾಗ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಾಗೂ ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿರುವ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ನಗರದ ವಿವಿಧ ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಗಾಜನೂರು, ಊರುಗಡೂರು, ರಾಮಿನಕೊಪ್ಪ, ಗೋಪಿಶೆಟ್ಟಿಕೊಪ್ಪ, ಇಲಿಯಾಸ್ ನಗರ, ಚಾಲುಕ್ಯನಗರ, ಕೆಎಚ್‌ಬಿ ಕಾಲೊನಿ, ಮಂಡ್ಲಿ, ಎನ್.ಟಿ. ರಸ್ತೆ, ಮಾರ್ನಮಿ ಬೈಲು, ಗಂಧರ್ವನಗರ, ಹಳೆ ಮಂಡ್ಲಿ, ವಾದಿ-ಎ-ಹುದಾ, ಸೂಳೆಬೈಲು, ಮದಾರಿಪಾಳ್ಯ, ಕಲ್ಲೂರು, ಮಂಡ್ಲಿ ಕೈಗಾರಿಕಾ ಪ್ರದೇಶ, ಕುರುಬರ ಪಾಳ್ಯ, ಸವಾಯಿಪಾಳ್ಯ, ಮುರಾದ್ ನಗರ, ಒ.ಟಿ. ರಸ್ತೆ, ಬಿ.ಬಿ. ರಸ್ತೆ, ಕುಂಬಾರಕೇರಿ, ಆರ್.ಎಂ.ಎಲ್. ನಗರ ಮತ್ತು 2ನೇ ಹಂತದಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ.

ಇದರೊಂದಿಗೆ ಎಲ್.ಎಲ್.ಆರ್. ರಸ್ತೆ, ಜೆ.ಸಿ. ನಗರ, ದುರ್ಗಿಗುಡಿ, ನೆಹರು ರಸ್ತೆಯ ಎಡಭಾಗ, ಗಾರ್ಡನ್ ಏರಿಯಾ, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ, ಆನಂದ್ ರಾವ್ ಬಡಾವಣೆ, ಮಂಜುನಾಥ ಬಡಾವಣೆ, ಟಿಪ್ಪುನಗರ, ಮಿಳಘಟ್ಟ, ಅಣ್ಣಾನಗರ, ತಿಮ್ಮಪ್ಪನ ಕೊಪ್ಪಲು, ಕೆ.ಆರ್.ಪುರಂ, ಸಿದ್ದಯ್ಯ ರಸ್ತೆ, ಗಾಂಧಿಬಜಾರ್, ಕುಂಬಾರ ಗುಂಡಿ, ಎಂಕೆಕೆ ರಸ್ತೆ, ಭರಮಪ್ಪ ನಗರ, ಹರಳೆಣ್ಣೆ ಕೇರಿ, ಶಾರದನಗರ, ಅನ್ನಪೂರ್ಣೇಶ್ವರಿ ಬಡಾವಣೆ, ಹರಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor