ಸುದ್ದಿಯ ಸ್ಥಳ: Shivamogga district, Karnataka
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಗರದ ಆಲ್ಗೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಇಂದು (ನವೆಂಬರ್ 19) ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಆಲ್ಗೊಳ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎ.ಎಫ್-11 ಫೀಡರ್ನಲ್ಲಿ ತುರ್ತು ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಒಟ್ಟು 8 ಗಂಟೆಗಳ ಕಾಲ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಈ ಹಿನ್ನೆಲೆಯಲ್ಲಿ ಅರವಿಂದನಗರ, ಸೂರ್ಯ ಲೇಔಟ್, ದೇವರಾಜ್ ಅರಸ್ ಬಡಾವಣೆ, ದೂರವಾಣಿ ಬಡಾವಣೆ, ಕನಕನಗರ, ಶಾರದಮ್ಮ ಲೇಔಟ್, ಶಿವರುದ್ರಪ್ಪ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿಗೆ ಅಡಚಣೆಯಾಗಲಿದೆ.ತುರ್ತು ಕಾಮಗಾರಿಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಮನವಿ ಮಾಡಿದೆ.
ಫೋಟೊ ಶೀರ್ಷಿಕೆ: ಶಿವಮೊಗ್ಗದ ಆಲ್ಗೊಳ ವಿದ್ಯುತ್ ವಿತರಣಾ ಕೇಂದ್ರದ ಎ.ಎಫ್-11 ಫೀಡರ್ನಲ್ಲಿ ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ನವೆಂಬರ್ 19ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ..
