Shivamogga Press Meet ರಾಜ್ಯ ಸರ್ಕಾರ ಪರಿಶಿಷ್ಟ ವರ್ಗಗಳಿಗೆ ದ್ರೋಹ ಮಾಡಿದೆ : ಕೆ.ಎಸ್. ಈಶ್ವರಪ್ಪ
Shivamogga Press Meet ರಾಜ್ಯ ಸರ್ಕಾರ ಎಸ್ಸಿಎಸ್ಪಿ-ಟಿಎಸ್ಪಿ (ಪರಿಶಿಷ್ಟ ಜಾತಿ ಉಪ ಯೋಜನೆ-ಬುಡಕಟ್ಟು ಉಪ ಯೋಜನೆ) ಅಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದು ಈ ಸಮುದಾಯಗಳಿಗೆ ಮಾಡಿದ ದ್ರೋಹ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Shivamogga Press Meet ಶಿವಮೊಗ್ಗ ನಗರದ ಪತ್ರಿಕಾ ಭವನದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2025-26ರ ಸಾಲಿನಲ್ಲಿ ಎಸ್ಸಿಎಸ್ಪಿ-ಟಿಎಸ್ಪಿ ಅಭಿವೃದ್ಧಿಗೆ ಒಟ್ಟು 42,017.51 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಆದರೆ, ಈ ಪೈಕಿ 11,896.84 ಕೋಟಿ ರೂಪಾಯಿ ಹಣವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ಬಳಸಲು ಮುಂದಾಗಿದೆ ಎಂದು ಆರೋಪಿಸಿದರು. ಈ ಹಿಂದೆಯೂ ಸಹ ಇದೇ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗಿತ್ತು, ಆದರೆ ಈಗ ಮತ್ತೆ ಅದೇ ರೀತಿ ಹಣವನ್ನು ತೆಗೆದು ಮೋಸ ಮಾಡಲಾಗಿದೆ ಎಂದು ಈಶ್ವರಪ್ಪ ದೂರಿದರು.
ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು ಎಂಬ ಕಾರಣದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಅಧಿಕಾರಕ್ಕೆ ಬಂದಿದ್ದೀರಿ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ಒಳ್ಳೆಯದೇ, ಆದರೆ ಎಸ್ಸಿಎಸ್ಪಿ-ಟಿಎಸ್ಪಿ ಅಭಿವೃದ್ಧಿಗೆ ಇಟ್ಟ ಹಣವನ್ನು ಈ ಯೋಜನೆಗೆ ಬಳಸುತ್ತಿರುವುದು ತಪ್ಪು” ಎಂದು ಅವರು ಅಭಿಪ್ರಾಯಪಟ್ಟರು.


Shivamogga Press Meet ರಾಜ್ಯ ಸರ್ಕಾರ ಹಿಂದಿನಿಂದಲೂ ‘ನಾವು ಹಿಂದುಳಿದ ವರ್ಗಗಳ ಪರ’ ಎಂದು ಹೇಳುತ್ತಾ ಬಂದಿದೆ. ಆದರೆ ಇಂದು ಅದೇ ಸರ್ಕಾರ ಹಿಂದುಳಿದ ವರ್ಗಗಳ ಹಣವನ್ನು ನುಂಗಿ ನೀರು ಕುಡಿಯುತ್ತಿದೆ ಎಂದು ಈಶ್ವರಪ್ಪ ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿಗಳು ಈಗಾಗಲೇ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಶಾಸಕರಿಗೂ ಅವರ ಕ್ಷೇತ್ರದ ಅಭಿವೃದ್ಧಿಗೆಂದು ತಲಾ 50 ಕೋಟಿ ಹಣ ನೀಡುವುದಾಗಿ ಹೇಳಿದ್ದಾರೆ. ಆ ಅಭಿವೃದ್ಧಿ ಕಾರ್ಯಗಳಿಗೆ ಪರಿಶಿಷ್ಟ ವರ್ಗಗಳ ಹಣವನ್ನು ಬಳಸಬಾರದು ಎಂದು ಎಚ್ಚರಿಸಿದ ಅವರು, ಹಾಗೇನಾದರೂ ಮಾಡಿದರೆ ಜನರು ಸರ್ಕಾರದ ವಿರುದ್ಧ ದಂಗೆ ಏಳುತ್ತಾರೆ ಎಂದರು.
