Shivamogga ಶಿವಮೊಗ್ಗ: ಜಿಲ್ಲೆಯಶಿಕಾರಿಪುರ ತಾಲೂಕಿನ ಶೀರಿಹಳ್ಳಿ ಗ್ರಾಮದ ಬಳಿ ಖಾಸಗಿ ಬಸ್ ಒಂದರ ಚಕ್ರದ ವೀಲ್ಹ್ ಕಟ್ ಆಗಿ, ಬಸ್ ನೇರವಾಗಿ ಅಡಕೆ ತೋಟಕ್ಕೆ ನುಗ್ಗಿದ ಭೀಕರ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Shivamogga ಘಟನೆಯ ವಿವರ
ಚಿಕ್ಕೇರೂರ್ನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಶೀರಿಹಳ್ಳಿ ಗ್ರಾಮದ ಬಳಿ ಚಲಿಸುತ್ತಿದ್ದಾಗ ಹಠಾತ್ತನೆ ವೀಲ್ಹ್ ಕಟ್ ಆಗಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದ ಅಡಕೆ ತೋಟಕ್ಕೆ ನುಗ್ಗಿ, ಅಲ್ಲಿನ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಒಂದು ವೇಳೆ ತೆಂಗಿನ ಮರಕ್ಕೆ ಡಿಕ್ಕಿ ಹೊಡೆಯದೇ ಇದ್ದಲ್ಲಿ ಬಸ್ ಪಲ್ಟಿಯಾಗಿ ದೊಡ್ಡ ಮಟ್ಟದ ಪ್ರಾಣಹಾನಿ ಸಂಭವಿಸುವ ಸಾಧ್ಯತೆಯಿತ್ತು.
ಬಸ್ಸಿನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 25ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಅಪಘಾತದ ತೀವ್ರತೆಗೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೆಂಗಿನ ಮರಕ್ಕೆ ಡಿಕ್ಕಿ ಹೊಡೆದಿದ್ದರಿಂದ ಬಸ್ಸಿನ ಮುಂಭಾಗ ಜಖಂಗೊಂಡಿದೆ.
Shivmogga Private Bus Plunges into Areca Garden


