ಸುದ್ದಿಯ ಸ್ಥಳ: Shivamogga district, Karnataka
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ನಗರದ ಬಾಪೂಜಿನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ಸಹ ಪ್ರಾಧ್ಯಾಪಕ ರವಿ. ಎನ್. ಅವರಿಗೆ ತಮಿಳುನಾಡಿನ ಅಣ್ಣಾಮಲೈ ವಿಶ್ವವಿದ್ಯಾಲಯ ಪಿಎಚ್.ಡಿ. ಪದವಿ ನೀಡಿ ಗೌರವಿಸಿದೆ.
The Functional Approaches of Tamil Speakers In Kannada Language (Special Reference to Shivamogga District Karnataka State) ಎಂಬ ಭಾಷಾವಿಜ್ಞಾನ ವಿಷಯದ ಕುರಿತು ಅವರು ಸಂಶೋಧನಾ ಪ್ರಬಂಧ ಮಂಡಿಸಿದ್ದರು.
ಅಣ್ಣಾಮಲೈ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ. ಪಿ. ಮಣಿಮಾರನ್ ಅವರ ಮಾರ್ಗದರ್ಶನದಲ್ಲಿ ಹಾಗೂ ಭದ್ರಾವತಿಯ ಹೆಬ್ಬೂರು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಪಾಲಾಕ್ಷ ಕೆ.ಆರ್. ಅವರ ಸಹ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ಪ್ರಬಂಧ ಮಂಡಿಸಿದ್ದರು.
ರವಿ ಅವರು ಶಿಕಾರಿಪುರದ ಚನ್ನಕೇಶವ ನಗರದ ನಿವಾಸಿಗಳಾದ ಎ. ನಟರಾಜ್ ಮೇಸ್ತ್ರಿ ಮತ್ತು ಪಾರ್ವತಮ್ಮ ದಂಪತಿಯ ಪುತ್ರರಾಗಿದ್ದಾರೆ.
