Shivamogga rain holiday july 05ಶಿವಮೊಗ್ಗ: ವರುಣನ ಆರ್ಭಟಕ್ಕೆ ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ
ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಂದು (ಜುಲೈ 5, ಶನಿವಾರ) ಸಹ ಎರಡು ತಾಲೂಕುಗಳ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸ್ಥಳೀಯ ತಹಸೀಲ್ದಾರ್‌ಗಳು ಈ ಆದೇಶ ಹೊರಡಿಸಿದ್ದಾರೆ.

ಹೊಸನಗರದಲ್ಲಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶ
ಹೊಸನಗರ ತಾಲೂಕಿನಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ, ತಹಸೀಲ್ದಾರ್ ರಶ್ಮಿ ಹಾಲೇಶ್ ಅವರು ಪ್ರಾಥಮಿಕ, ಹಿರಿಯ ಮತ್ತು ಪ್ರೌಢ ಶಾಲೆಗಳು, ಪದವಿಪೂರ್ವ ಕಾಲೇಜುಗಳು ಹಾಗೂ ಅಂಗನವಾಡಿ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.
Shivamogga rain holiday july 05 ಸಾಗರ ತಾಲ್ಲೂಕುನಲ್ಲಿಯು ಸಹ ರಜೆ /
ಇದೇ ರೀತಿ, ಸಾಗರ ತಾಲೂಕಿನಲ್ಲಿಯೂ ಭಾರೀ ಮಳೆಯ ವಾತಾವರಣ ಇರುವ ಕಾರಣ, ಮಕ್ಕಳ ಹಿತದೃಷ್ಟಿಯಿಂದ ಸಾಗರ ತಹಸೀಲ್ದಾರ್ ಅವರ ಆದೇಶದ ಮೇರೆಗೆ, ತಾಲೂಕಿನ ಎಲ್ಲಾ ಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ.
