ಇವತ್ತು ಆರೆಂಜ್ , ನಾಳೆ ಯಲ್ಲೋ ಅಲರ್ಟ್ | ಶಿವಮೊಗ್ಗ ಸೇರಿದಂತೆ ಹೇಗಿದೆ ಎಲ್ಲೆಡೆ ಮಳೆಯ ಮನ್ಸೂಚನೆ
shivamogga rainfall details
SHIVAMOGGA | MALENADUTODAY NEWS | Jul 9, 2024 ಮಲೆನಾಡು
ಶಿವಮೊಗ್ಗದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ನಕ್ಷೆಯಲ್ಲಿ ಇವತ್ತು ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ನಾಳೆ ಯಲ್ಲೋ ಅಲರ್ಟ್ ನೀಡಲಾಗಿದೆ. ಇನ್ನೂ ಹವಾಮಾನ ಇಲಾಖೆಯ ದೈನಂದಿನ ಬುಲೆಟಿನ್ ಪ್ರಕಾರ, ಇವತ್ತು ಅಂದರೆ (09ನೇ ಜುಲೈ 2024) ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬೀದರ್, ಕಲಬುರ್ಗಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ/ಗುಡುಗು ಸಹಿತ ಗಾಳಿಯ ವೇಗ (30-40 kmph) ಬರುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆಯಿದೆ.
(10ನೇ ಜುಲೈ 2024): ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ದಿನ 4 (11ನೇ ಜುಲೈ 2024): ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.