ಶಿವಮೊಗ್ಗ: ಸಿರಿಗೆರೆ ಬಳಿ ಭೀಕರ ಕಾರು ಅಪಘಾತ – ಬಿಎಸ್ಎನ್ಎಲ್ ನಿವೃತ್ತ ನೌಕರ ಸಾವು

ಹಂಚಿಕೊಳ್ಳಿ
WhatsApp Facebook X Telegram
Shivamogga Road Accident 65-Year-Old Killed
Shivamogga Road Accident 65-Year-Old Killed

Shivamogga Road Accident ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಸಿರಿಗೆರೆ ಸಮೀಪದ ಹೊಸೂರು ದರ್ಗಾ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಿಎಸ್ಎನ್ಎಲ್ ನಿವೃತ್ತ ನೌಕರರೊಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮಂಗಳೂರಿನಿಂದ ದಾವಣಗೆರೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮೋರಿಗೆ ಜೋರಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. 

ಶಿವಮೊಗ್ಗ: ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ : ಮಧು ಬಂಗಾರಪ್ಪ ವಾಗ್ದಾಳಿ

ದಾವಣಗೆರೆ ಮೂಲದ ಸುರೇಶ್ (65) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರು ತಮ್ಮ ಅನಾರೋಗ್ಯದ ಚಿಕಿತ್ಸೆಗಾಗಿ ಮಗ ಅಮೃತ್ ಜೊತೆ ಮಂಗಳೂರಿನ ಆಸ್ಪತ್ರೆಗೆ ತೆರಳಿದ್ದರು. ಚಿಕಿತ್ಸೆ ಮುಗಿಸಿಕೊಂಡು ತೀರ್ಥಹಳ್ಳಿ-ಹಣಗೆರೆ-ಆಯನೂರು-ಸವಳಂಗ ಮಾರ್ಗವಾಗಿ ದಾವಣಗೆರೆಗೆ ಹಿಂತಿರುಗುತ್ತಿದ್ದಾಗ ಈ ಅನಾಹುತ ನಡೆದಿದೆ. 

ಅಪಘಾತದ ತೀವ್ರತೆಗೆ ಸುರೇಶ್ ಅವರು ಘಟನಾ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಕಾರು ಚಲಾಯಿಸುತ್ತಿದ್ದ ಅವರ ಮಗ ಅಮೃತ್ (36) ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor