17ನೇ ಮೈಲಿಕಲ್ಲು ಬಳಿ ರಸ್ತೆ ಅಪಘಾತ: ಕಾರು ಡಿಕ್ಕಿಯಾಗಿ ಮಹಿಳೆ ಸಾವು

ಶಿವಮೊಗ್ಗದ 17ನೇ ಮೈಲಿಕಲ್ಲು ಬಳಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬ್ಯಾಂಕ್ ಬೇಬಿ (65) ಎಂಬ ಮಹಿಳೆ ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
17ನೇ ಮೈಲಿಕಲ್ಲು ಬಳಿ ರಸ್ತೆ ಅಪಘಾತ: ಕಾರು ಡಿಕ್ಕಿಯಾಗಿ ಮಹಿಳೆ ಸಾವು
ಸುದ್ದಿ ಸಾರಾಂಶ

ಶಿವಮೊಗ್ಗದ 17ನೇ ಮೈಲಿಕಲ್ಲು ಬಳಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬ್ಯಾಂಕ್ ಬೇಬಿ (65) ಎಂಬ ಮಹಿಳೆ ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.

ಸುದ್ದಿಯ ಸ್ಥಳ: Thirthahalli, Shivamogga, Karnataka

17ನೇ ಮೈಲಿಕಲ್ಲು ನಿವಾಸಿ  ಬೇಬಿ (65) ಮೃತಪಟ್ಟ ಮಹಿಳೆ ಎಂದು ತಿಳಿದುಬಂದಿದೆ.
ಎಂದಿನಂತೆ ಕೆಲಸ ಮುಗಿಸಿಕೊಂಡು ಬೇಬಿ ಅವರು ರಸ್ತೆ ಬದಿಯಲ್ಲಿ ನಡೆದುಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರೊಂದು ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಅಪಘಾತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

17ನೇ ಮೈಲಿಕಲ್ಲು ಬಳಿ ರಸ್ತೆ ಅಪಘಾತ: ಕಾರು ಡಿಕ್ಕಿಯಾಗಿ ಮಹಿಳೆ ಸಾವು
ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor