Shivamogga Feb 21, 2024 ಅಪರಿಚಿತ ಕರೆ ಬಂದ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸರು ನಡೆಯುತ್ತಿದ್ದ ಬಾಲ್ಯ ವಿವಾಹವನ್ನ ತಡೆದಿರುವ ಬಗ್ಗೆ ವರದಿಯಾಗಿದೆ.
ಕಳೆದ 17.02.2024ರಂದು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು.
ಈ ಹಿನ್ನೆಲೆಯಲ್ಲಿ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯವರು 112ಗೆ ಕರೆ ಮಾಡಿ ಅಪ್ರಾಪ್ತ ಬಾಲಕಿಯ ಮದುವೆ ಮಾಡಲು ತಯಾರಿ ನಡೆಸುತ್ತಿರುವುದಾಗಿ ತಿಳಿಸಿರುತ್ತಾರೆ.
ವಿಷಯ ತಿಳಿದು ಸ್ಥಳಕ್ಕೆ ತೆರಳಿದ ERV ಸಿಬ್ಬಂದಿಗಳು ಅಪ್ರಾಪ್ತ ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರ ವಶಕ್ಕೆ ಒಪ್ಪಿಸಿದ್ದಾರೆ.