ಚಪ್ಪರ ಪೂಜೆ ನಡೆದು ಮದುವೆ ಶಾಸ್ತ್ರ ಆರಂಭವಾಗಿತ್ತು! ಎಂಟ್ರಿಕೊಟ್ರು ಪೊಲೀಸರು? ಕಾರಣವೇನು ಓದಿ

ಹಂಚಿಕೊಳ್ಳಿ
WhatsApp Facebook X Telegram

Shivamogga Feb 21, 2024  ಅಪರಿಚಿತ ಕರೆ ಬಂದ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸರು ನಡೆಯುತ್ತಿದ್ದ ಬಾಲ್ಯ ವಿವಾಹವನ್ನ ತಡೆದಿರುವ ಬಗ್ಗೆ ವರದಿಯಾಗಿದೆ. 

ಕಳೆದ 17.02.2024ರಂದು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. 

ಈ ಹಿನ್ನೆಲೆಯಲ್ಲಿ  ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯವರು 112ಗೆ ಕರೆ ಮಾಡಿ ಅಪ್ರಾಪ್ತ ಬಾಲಕಿಯ ಮದುವೆ ಮಾಡಲು ತಯಾರಿ ನಡೆಸುತ್ತಿರುವುದಾಗಿ ತಿಳಿಸಿರುತ್ತಾರೆ. 

ವಿಷಯ ತಿಳಿದು ಸ್ಥಳಕ್ಕೆ ತೆರಳಿದ ERV ಸಿಬ್ಬಂದಿಗಳು ಅಪ್ರಾಪ್ತ ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರ ವಶಕ್ಕೆ ಒಪ್ಪಿಸಿದ್ದಾರೆ. 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor