ಸಕ್ರೆಬೈಲು : ಖಾಸಗಿ ಶಾಲಾ ಬಸ್​ ಅಪಘಾತ, ಮಕ್ಕಳಿಗೆ ಸಣ್ಣಪುಟ್ಟ ಗಾಯ 

ಹಂಚಿಕೊಳ್ಳಿ
WhatsApp Facebook X Telegram
Shivamogga School Bus
Shivamogga School Bus

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ:ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ಸೊಂದು ಅಪಘಾತಕ್ಕೀಡಾಗಿದ್ದು, ಚಾಲಕ ಹಾಗೂ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಶಿವಮೊಗ್ಗ ಸಮೀಪದ ಸಕ್ರೆಬೈಲ್‌ನಲ್ಲಿ ನಡೆದಿದೆ.

ಖಾಸಗಿ ಶಾಲೆಯೊಂದರ ಬಸ್ ಸಕ್ರೆಬೈಲ್ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ಲಾರಿಯೊಂದು ಅಡ್ಡ ಬಂದಿದೆ ಎನ್ನಲಾಗಿದೆ. ಅದನ್ನು ತಪ್ಪಿಸಲು ಹೋಗಿ ಚಾಲಕ ಬಸ್ಸನ್ನು ರಸ್ತೆ ಬದಿಗೆ ತೆಗೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದೆ.

ಅಪಘಾತದ ಪರಿಣಾಮವಾಗಿ ಬಸ್ಸಿನಲ್ಲಿದ್ದ ಕೆಲವು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದುಬರಬೇಕಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor