ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ರಜೆ: ಈ 4 ತಾಲ್ಲೂಕುಗಳ ಶಾಲಾ-ಕಾಲೇಜುಗಳು ಇಂದು ಬಂದ್

ಹಂಚಿಕೊಳ್ಳಿ
WhatsApp Facebook X Telegram
Shivamogga Rainfall Report
Shivamogga Rainfall Report

Schools and Colleges Closed / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಮಳೆ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಇವತ್ತು ಸಹ ಶಿವಮೊಗ್ಗ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಸಾಗರ, ಸೊರಬ, ತೀರ್ಥಹಳ್ಳಿ ಹಾಗೂ ಹೊಸನಗರ ತಾಲ್ಲೂಕುಗಳಲ್ಲಿ ಆಯಾ ತಹಶೀಲ್ದಾರ್‌ಗಳು ಈ ಸಂಬಂಧ ಆದೇಶವನ್ನು ಹೊರಡಿಸಿದ್ದಾರೆ.

ಸೊರಬ ತಾಲ್ಲೂಕಿನಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಅವರು ರಜೆ ಆದೇಶ ಹೊರಡಿಸಿದ್ದು, ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇದು ಅನ್ವಯವಾಗಲಿದೆ.

ಮಳೆಯ ಕಾರಣದಿಂದ ನಷ್ಟವಾದ ಶೈಕ್ಷಣಿಕ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಂಡು ತರಗತಿಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ. ಇದೇ ರೀತಿಯ ಮುಂಜಾಗ್ರತಾ ಕ್ರಮವನ್ನು ಕೈಗೊಂಡಿರುವ ಸಾಗರ ತಾಲ್ಲೂಕು ಆಡಳಿತವು ಸಹ ಶಾಲಾ-ಕಾಲೇಜುಗಳಿಗೆ ಈಗಾಗಲೇ ರಜೆಯನ್ನು ಪ್ರಕಟಿಸಿದೆ.

ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಕಾರಣ, ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲಾ ಹಾಗೂ ಕಾಲೇಜುಗಳಿಗೆ ಬುಧವಾರದ ಮಟ್ಟಿಗೆ ರಜೆ ನೀಡಲಾಗಿದೆ.

ಹೊಸನಗರ ತಾಲ್ಲೂಕಿನಲ್ಲಿ ಮಳೆಯ ತೀವ್ರತೆಯನ್ನು ಪರಿಗಣಿಸಿರುವ ತಹಶೀಲ್ದಾರ್ ಭರತ್ ರಾಜ್ ಅವರು, ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor