ರಾಷ್ಟ್ರಭಕ್ತ ಬಳಗದ ಪ್ರತಿಭಟನೆ ಬೆನ್ನಲ್ಲೇ ಎಚ್ಚೆತ್ತ ಮಧು ಬಂಗಾರಪ್ಪ? ಸಚಿವ ಜಮೀರ್ ಅಹಮದ್ ಖಾನ್​ ಜೊತೆ ಮಹತ್ವದ ಸಭೆ

ಹಂಚಿಕೊಳ್ಳಿ
WhatsApp Facebook X Telegram
Shivamogga Site Distribution Delay Madhu Bangarappa Meets Zameer Ahmed Khan
Shivamogga Site Distribution Delay Madhu Bangarappa Meets Zameer Ahmed Khan
dasrara add shivamogga

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಜಿಲ್ಲೆಯಲ್ಲಿ ವಸತಿ ಇಲಾಖೆಯ ವಿವಿಧ ಯೋಜನೆಗಳಡಿ ಬಡವರಿಗೆ ನಿವೇಶನ ಹಂಚಿಕೆಯಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಜಿಲ್ಲಾ ಉಸ್ತುವಾರಿ, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಿನ್ನೆ ದಿನ ಗುರುವಾರ ಬೆಂಗಳೂರಿನಲ್ಲಿ ವಸತಿ ಸಚಿವ ಬಿ.ಝೆಡ್. ಜಮೀರ್ ಅಹಮದ್ ಖಾನ್ ಅವರೊಂದಿಗೆ ಮಹತ್ವದ ಸಭೆ ನಡೆಸಿ ಚರ್ಚಿಸಿದ್ದಾರೆ.

ಬೆಂಗಳೂರಿನ ಗೃಹ ಮಂಡಳಿ ಕಚೇರಿಯಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ನಿವೇಶನ ಹಂಚಿಕೆಗೆ ಎದುರಾಗಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ಅಡೆ-ತಡೆಗಳ ಕುರಿತು ಚರ್ಚಿಸಿದ್ರು. ಫಲಾನುಭವಿಗಳಿಗೆ ನಿವೇಶನ ಹಂಚಿಕೆಗೆ ತ್ವರಿತ ಕ್ರಮ ತೆಗೆದುಕೊಳ್ಳುವ ಕುರಿತು ಸಮಾಲೋಚಿಸಿದ್ರು.

shivamogga dasara add
dasrara add shivamogga
dasrara add shivamogga

ಸಭೆಯ ಬಳಿಕ ವಸತಿ ಸಚಿವ ಜಮೀರ್ ಅಹಮದ್ ಖಾನ್, ಯಾವುದೇ ಕಾರಣಕ್ಕೂ ಶಿವಮೊಗ್ಗ ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ, ಎಲ್ಲರಿಗೂ ನಿವೇಶನ ಸಿಗುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇನ್ನೂ ಇದೇ ವಿಚಾರದಲ್ಲಿ ಇತ್ತೀಚೆಗಷ್ಟೇ ರಾಷ್ಟ್ರಭಕ್ತ ಬಳಗದ ಕಾರ್ಯಕರ್ತರು ಶಿವಮೊಗ್ಗ ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಬಡವರು ಸೂರಿಗಾಗಿ ವರ್ಷಗಟ್ಟಲೆ ಕಾಯುತ್ತಿದ್ದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಪ್ರತಿಭಟನೆ ಬೆನ್ನಲ್ಲೆ ಮಧು ಬಂಗಾರಪ್ಪ ಸಭೆ ನಡೆಸಿದ್ದಾರೆ.

shivamogga dasara add

ಈ ಮಹತ್ವದ ಸಭೆಯಲ್ಲಿ ಶಾಸಕ ಜಿ.ಟಿ. ದೇವೇಗೌಡ, ಗೃಹ ಮಂಡಳಿ ಆಯುಕ್ತ ದಯಾನಂದ, ‘ಭಾರತ್ ಜೋಡೋ ಯುವ ಸಂಘ’ದ ಜಿಲ್ಲಾ ಸಂಯೋಜಕ ಟಿ.ಡಿ. ಗೀತೇಂದ್ರ, ಒಬಿಸಿ ರಾಜ್ಯ ಘಟಕದ ಸಂಯೋಜಕ ಜಿ.ಡಿ. ಮಂಜುನಾಥ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

shivamogga dasara add
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor