ಶಿವಮೊಗ್ಗ: ಕವರ್ ಹಿಡಿದುಕೊಂಡು ಓಡುತ್ತಿದ್ದವನು ಪೊಲೀಸರನ್ನು ಕಂಡ ಕೂಡಲೇ ನೀಲಗಿರಿ ತೋಪಿಗೆ ಪರಾರಿ; ಬಂಧಿಸಿದಾಗ ತಿಳೀತು ಸತ್ಯ

ಹಂಚಿಕೊಳ್ಳಿ
WhatsApp Facebook X Telegram
ಶಿವಮೊಗ್ಗ ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಶಿವಮೊಗ್ಗ ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಶಿವಮೊಗ್ಗದ ಸೊಗಾನೆ ಕೇಂದ್ರ ಕಾರಾಗೃಹದ ಆವರಣಕ್ಕೆ ನಿಷೇಧಿತ ವಸ್ತುಗಳನ್ನು ಎಸೆಯಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ  ಪ್ರಕರಣ ದಾಖಲಾಗಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ.  

 ಶಿವಮೊಗ್ಗದ ಸೊಗಾನೆ ಕೇಂದ್ರ ಕಾರಾಗೃಹದ ಕಾಂಪೌಂಡ್ ಬಳಿ ಕಪ್ಪು ಬಣ್ಣದ ಕವರ್ ಹಿಡಿದುಕೊಂಡು ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಓಡಿ ಹೋಗುತ್ತಿರುವುದನ್ನು ಜೈಲು ಸಿಬ್ಬಂದಿ ಗಮನಿಸಿದ್ದಾರೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಆತನನ್ನು ಹಿಡಿಯಲು ಬೆನ್ನಟ್ಟಿದಾಗ, ಆ ವ್ಯಕ್ತಿ ನಿರ್ಮಾಣ ಹಂತದ ಕಾರಾಗೃಹದ ಕಾಂಪೌಂಡ್ ಹಾರಿ ನೀಲಗಿರಿ ತೋಪಿನ ಕಡೆಗೆ ಪರಾರಿಯಾಗಲು ಯತ್ನಿಸಿದ್ದಾನೆ. ನಂತರ ಕಾರಾಗೃಹದ ಸುತ್ತಮುತ್ತ ಹುಡುಕಾಟ ನಡೆಸಿದಾಗ, ಸಿರಿಯೂರು ರಸ್ತೆಯ ಬಳಿ ಓಡಾಡುತ್ತಿದ್ದ ಹೊನ್ನೇಶ ಪಿ.ಜಿ. ಎಂಬಾತನನ್ನು ಪೊಲೀಸರು ಹಾಗೂ ಜೈಲು ಸಿಬ್ಬಂದಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.   

ವಿಚಾರಣೆ ವೇಳೆ ಸಿಕ್ಕಿಬಿದ್ದ ಆರೋಪಿಯು ತಾನು ತನ್ನ ಸ್ನೇಹಿತರಾದ ಕರೀಂ ಹಾಗೂ ಪುನೀತ್ ಎಂಬುವವರ ಜೊತೆ ದ್ವಿಚಕ್ರ ವಾಹನದಲ್ಲಿ ಬಂದು, ಜೈಲಿನ ಒಳಗೆ ನಿಷೇಧಿತ ವಸ್ತುವನ್ನು ಎಸೆಯಲು ಯತ್ನಿಸಿರುವುದಾಗಿ ಬಾಯಿಬಿಟ್ಟಿದ್ದಾನೆ. ಅಲ್ಲದೆ, ಕಾರಾಗೃಹದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಮತ್ತೊಬ್ಬ ಆರೋಪಿಯನ್ನು ಕರೀಂ ಎಂದು ಗುರುತಿಸಲಾಗಿದೆ.   

ಕಾರಾಗೃಹದ ಒಳಗೆ ನಿಷೇಧಿತ ವಸ್ತುಗಳನ್ನು ತಲುಪಿಸಲು ಯತ್ನಿಸಿದವರ ವಿರುದ್ದ ಕಾರಾಗೃಹದ ಮುಖ್ಯ ಅಧೀಕ್ಷಕರು ನೀಡಿದ ದೂರಿನ ಮೇರೆಗೆ, ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor