Shivamogga SP ಶಿವಮೊಗ್ಗ : ಈ ಹಿಂದೆಲ್ಲಾ ಪ್ರಭಾವಿಗಳ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆಗಳನ್ನು ಸೃಷ್ಟಿಸಿ ಸಾರ್ವಜನಿಕರನ್ನು ವಿವಿಧ ರೀತಿಯಲ್ಲಿ ವಂಚಿಸುತ್ತಿದ್ದ ವಂಚಕರ ಗುಂಪು ಇದೀಗ ಪೊಲೀಸ್ ಇಲಾಖೆಗೂ ಕಾಲಿಟ್ಟಿದೆ. ಅದರಂತೆ ಶಿವಮೊಗ್ಗದ ಎಸ್ ಪಿ ನಿಖಿಲ್ ಬಿ ಹೆಸರಲ್ಲಿ ಫೇಸ್ ಬುಕ್ ಖಾತೆ ಓಪನ್ ಮಾಡಿರುವ ವಂಚಕರು ಸಾರ್ವಜನಿಕರನ್ನು ಸಂಪರ್ಕಿಸಲು ಪ್ರಯತ್ನ ನಡೆಸುತ್ತಿದೆ.
ಮಾಹಿತಿಯ ಪ್ರಕಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ನಿಖಿಲ್ ಬಿ. ಅವರ ಹೆಸರಿನಲ್ಲಿರುವ ಫೇಸ್‌ಬುಕ್ ಖಾತೆಯಿಂದ ಮೆಸೆಂಜರ್ ಮೂಲಕ ಜನರಿಗೆ ಸಂದೇಶಗಳನ್ನು ಕಳುಹಿಸಿ ಪರಿಚಯ ಬೆಳೆಸಲು ಪ್ರಯತ್ನಿಸಲಾಗುತ್ತಿದೆ ಎಂಬ ಬಲವಾದ ಅನುಮಾನ ವ್ಯಕ್ತವಾಗಿದೆ. ಉನ್ನತ ಅಧಿಕಾರಿಗಳ ಹೆಸರನ್ನು ದುರುಪಯೋಗಪಡಿಸಿಕೊಂಡು ನಕಲಿ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಸೃಷ್ಟಿಸುವುದು, ಸಾರ್ವಜನಿಕರ ವಿಶ್ವಾಸ ಗಳಿಸಿ ಹಣದ ಬೇಡಿಕೆ ಇಡುವುದು ಅಥವಾ ವೈಯಕ್ತಿಕ ಮಾಹಿತಿ ಸಂಗ್ರಹಿಸುವಂತಹ ಸೈಬರ್ ಅಪರಾಧದ ಘಟನೆಗಳು ಇತ್ತೀಚಿನ ದಿನಗಳಲ್ಲಿ ಸರಣಿ ರೂಪದಲ್ಲಿ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಇಲಾಖೆಯಿಂದಲೇ ಅಧಿಕೃತ ಎಚ್ಚರಿಕೆ ನೀಡಲಾಗಿದೆ.
ಈ ಕುರಿತು ಮಲೆನಾಡು ಟುಡೆ ದೂರವಾಣಿ ಮುಖಾಂತರ ಶಿವಮೊಗ್ಗ ಎಸ್ ಪಿ ನಿಖಿಲ್ರವರನ್ನು ಸಂಪರ್ಕಿಸಿದಾಗ ಪ್ರತಿಕ್ರಿಯಿಸಿದ ಎಸ್ಪಿಯವರು. ಹೌದು ಅನೇಕ ದಿನಗಳಿಂದ ನನ್ನ ಹೆಸರಿನಲ್ಲಿ ಫೇಕ್ ಅಕೌಂಟ್ಗಳನ್ನು ಮಾಡಿ ಜನರನ್ನು ಸಂಪರ್ಕಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಯಾರು ಸಹ ಅದನ್ನು ನಿಜವೆಂದು ನಂಬಿ ಮೋಸ ಹೋಗಬಾರದು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದ್ದಾರೆ.
Shivamogga SP GK Nikhil B Fake Facebook Profile
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.
