SHIVAMOGGA NEWS TODAY

ಶಿವಮೊಗ್ಗ: ಬ್ಯಾಂಕ್​ ಡಿಟೈಲ್ಸ್​ ನೀಡ್ತಿದ್ದೀರಾ, ಹಾಗಾದ್ರೆ ನೀಮ್ಮೇಲೂ ಬಿಳ್ಬೋದು ಕೇಸ್​, ಮ್ಯೂಲ್​ ಅಕೌಂಟ್​ ಬಗ್ಗೆ ಎಸ್​, ಪಿ ಎಚ್ಚರಿಕೆ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ : ಸಣ್ಣಪುಟ್ಟ ಹಣದ ಆಮಿಷಕ್ಕೆ ಬಲಿಯಾಗಿ ತಮ್ಮ ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್ ಅಥವಾ ಇಂಟರ್‌ನೆಟ್ ಬ್ಯಾಂಕಿಂಗ್ ವಿವರಗಳನ್ನು ಅಪರಿಚಿತರಿಗೆ ನೀಡುವುದು ಡೆಂಜರ್​  ಎಂದು ಶಿವಮೊಗ್ಗ ಜಿಲ್ಲಾ ಪೊಲೀಸರು ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ರೀತಿಯಾಗಿ ಬ್ಯಾಂಕ್ ಖಾತೆಗಳನ್ನು ಅಕ್ರಮ ವ್ಯವಹಾರಕ್ಕೆ ಬಳಸಿಕೊಳ್ಳುವ ಪ್ರಕ್ರಿಯೆಯನ್ನು ಸೈಬರ್ ಕ್ರೈಂ ಲೋಕದಲ್ಲಿ ಮ್ಯೂಲ್ ಅಕೌಂಟ್ ಎಂದು ಕರೆಯಲಾಗುತ್ತಿದ್ದು, ಈ ಬಗ್ಗೆ ಶಿವಮೊಗ್ಗ ಎಸ್​ ಪಿ ನಿಖಿಲ್ ಬಿ. ಅವರು ಜನರಲ್ಲಿ ಅರಿವು ಮೂಡಿಸಿದ್ದಾರೆ. 

ಸಾಗರ: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ 

ವಂಚನೆ ನಡೆಯುವುದು ಹೇಗೆ?

ಸೈಬರ್ ವಂಚಕರು ನಿಮ್ಮ ಬ್ಯಾಂಕ್ ವಿವರಗಳನ್ನು ಪಡೆದುಕೊಂಡು, ನಿಮ್ಮ ಹೆಸರಿನಲ್ಲೇ ಇತರ ಅಮಾಯಕರನ್ನು ವಂಚಿಸುತ್ತಾರೆ. ಆಕ್ರಮವಾಗಿ ಸಂಪಾದಿಸಿದ ಹಣವನ್ನು ನಿಮ್ಮ ಖಾತೆಯ ಮೂಲಕ ವರ್ಗಾವಣೆ ಮಾಡಿಕೊಳ್ಳುತ್ತಾರೆ. ಇದರಿಂದ ಅಂತಿಮವಾಗಿ ನಿಮ್ಮ ಬ್ಯಾಂಕ್ ಖಾತೆ ಫ್ರೀಜ್ ಆಗುವುದಲ್ಲದೆ, ಪೊಲೀಸ್ ದಾಖಲೆಗಳಲ್ಲಿ ನಿಮ್ಮ ಹೆಸರೇ ಪ್ರಮುಖ ಆರೋಪಿಯಾಗಿ ಪರಿಗಣಿಸಲಾಗುತ್ತದೆ.

Shivamogga SP ಎದುರಿಸಬೇಕಾದ ಪರಿಣಾಮಗಳು

ಒಮ್ಮೆ ನಿಮ್ಮ ಖಾತೆಯು ಇಂತಹ ಅಕ್ರಮ ಚಟುವಟಿಕೆಗೆ ಬಳಕೆಯಾದಲ್ಲಿ, ನಿಮ್ಮ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗುವುದು. ಇಂತಹ ಪ್ರಕರಣಗಳಲ್ಲಿ ತನಿಖಾ ಸಂಸ್ಥೆಗಳು ನಿಮ್ಮನ್ನು ಬಂಧಿಸುವ ಸಾಧ್ಯತೆಗಳು  ಹೆಚ್ಚಿರುತ್ತವೆ. ಒಂದು ವೇಳೆ ನ್ಯಾಯಾಲಯದಲ್ಲಿ ಆರೋಪ ಸಾಬೀತಾದರೆ, ಕಾನೂನಿನ ಪ್ರಕಾರ ಕಠಿಣ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ

ಈ ಪ್ರಕರಣ ಕೇವಲ ಜೈಲುವಾಸಕ್ಕೆ ಸೀಮಿತವಾಗುವುದಿಲ್ಲ. ಒಮ್ಮೆ ಇಂತಹ ಪ್ರಕರಣದಲ್ಲಿ ಸಿಲುಕಿಕೊಂಡರೆ, ಭವಿಷ್ಯದಲ್ಲಿ ನೀವು ಯಾವುದೇ ಬ್ಯಾಂಕ್‌ನಲ್ಲಿ ಹೊಸ ಖಾತೆ ತೆರೆಯಲು ಹೋದಾಗ ಗಂಭೀರ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲದೆ, ನೀವು ಸದಾ ಕಾಲ ಪೊಲೀಸ್ ಕಣ್ಗಾವಲಿನಲ್ಲಿ  ಇರಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ.

ಆದ್ದರಿಂದ, ಸಾರ್ವಜನಿಕರು ಯಾವುದೇ ಕಾರಣಕ್ಕೂ ಅಪರಿಚಿತರು ನೀಡುವ ಹಣದ ಆಮಿಷಕ್ಕೆ ಒಳಗಾಗಬಾರದು. ನಿಮ್ಮ ವೈಯಕ್ತಿಕ ಬ್ಯಾಂಕ್ ವಿವರಗಳನ್ನು ಯಾರಿಗೂ ಬಳಸಲು ನೀಡಬಾರದು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.

Shivamogga SP Warns Against Mule Account Scams

Shivamogga SP Warns Against Mule Account Scams
Shivamogga SP Warns Against Mule Account Scams
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.