shivamogga : ಶಿವಮೊಗ್ಗದಲ್ಲಿ ರೈಲಿಗೆ ತಲೆಕೊಟ್ಟು ವಿದ್ಯಾರ್ಥಿ ಸಾವು/ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಆತ್ಮಹತ್ಯೆ ಶಂಕೆ

ಶಿವಮೊಗ್ಗ (shivamogga) ನಗರದ  ಪಶು ವಿಶ್ವವಿದ್ಯಾಲಯ ಸಮೀಪದಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿ ಹಾದು ಹೋಗುವ ರೈಲ್ವೆ ಹಳಿಯ ಬಳಿಯಲ್ಲಿ ಸ್ಥಳೀಯ ಕಾಲೇಜೊಂದರ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. 
ಮೃತ ಪಟ್ಟ ವಿದ್ಯಾರ್ಥಿಯ ಗುರುತು ಪತ್ತೆಯಾಗಿದ್ದು, ಶಿವಮೊಗ್ಗ ನಿವಾಸಿ  ಫಸ್ಟ್ ಪಿಯುಸಿ ವಿದ್ಯಾರ್ಥಿ ಎಂಬುದು ಗೊತ್ತಾಗಿದೆ. ಮೂಲಗಳ ಪ್ರಕಾರ, ಇತ್ತೀಚಿನ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿ ನೊಂದಿ್ದ ಎನ್ನಲಾಗಿದೆ. ಚೆನ್ನಾಗಿ ಓದ್ತಿದ್ದ ವಿದ್ಯಾರ್ಥಿ ಕಡಿಮೆ ಅಂಕ ಪಡೆದಿದ್ದಕ್ಕೆ ಬೇಸರಗೊಂಡಿದ್ದ. ಆದರೆ ಚೆನ್ನಾಗಿ ಓದುತ್ತಿದ್ದವನಿಗೆ ಕಡಿಮೆ ಅಂಕ ಬಂದಿದ್ದಕ್ಕೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ಇದೇ ವಿಚಾರಕ್ಕೆ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.  ನಿನ್ನೆಯೇ ಮನೆಯಿಂದ ಹೊರಹೋಗಿದ್ದ ವಿದ್ಯಾರ್ಥಿ ಬಗ್ಗೆ ಪೋಷಕರು ಶಿವಮೊಗ್ಗ ಪೊಲೀಸರಿಗೆ ದೂರು ನೀಡಿದ್ದರು. 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

Leave a Comment