ಕಾಲೇಜಿನ ಕಟ್ಟದಿಂದ ಬಿದ್ದು ವಿದ್ಯಾರ್ಥಿನಿ ಸಾವು! ಶಿಕ್ಷಣ ಸಂಸ್ಥೆಯ ಎದುರು ಪೋಷಕರ ಆಕ್ರೋಶ

ಹಂಚಿಕೊಳ್ಳಿ
WhatsApp Facebook X Telegram
ಕಾಲೇಜಿನ ಕಟ್ಟದಿಂದ ಬಿದ್ದು ವಿದ್ಯಾರ್ಥಿನಿ ಸಾವು!  ಶಿಕ್ಷಣ ಸಂಸ್ಥೆಯ ಎದುರು ಪೋಷಕರ ಆಕ್ರೋಶ

SHIVAMOGGA  |   Dec 5, 2023 |   ಶಿವಮೊಗ್ಗದ ಖಾಸಗಿ ಶಾಲೆಯೊಂದರ ವಿದ್ಯಾರ್ಥಿನಿ ಶಾಲೆ ಕಟ್ಟದಿಂದ ಬಿದ್ದು ಸಾವನ್ನಪ್ಪಿದ್ದಾಳೆ. 

 

ಶಿವಮೊಗ್ಗದ ಕುವೆಂಪು ರಸ್ತೆ ಸಮೀಪ ಇರುವ ಆದಿಚುಂಚನಗಿರಿ ಪಿಯು ಕಾಲೇಜಿನಲ್ಲಿ ಈ ಘಟನೆ ನಡೆದಿದೆ.  ಮೇಘನಾ ಎಂಬ 18 ವರ್ಷದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಚನ್ನಗಿರಿ ತಾಲ್ಲೂಕು ಸಂತೆಬೆನ್ನೂರು ಮೂಲದ ವಿದ್ಯಾರ್ಥಿನಿ ಮೇಘನಾ ಎಂಬವರು ಸಾವನ್ನಪ್ಪಿದ್ದಾರೆ. 

 

READ : ಮೂರು ದಿನ ಶಿವಮೊಗ್ಗ-ಭದ್ರಾವತಿ ನಡುವೆ ಸಂಚಾರ ಬಂದ್! ಡಿಸಿ ಆದೇಶ! ಯಾಕೆ? ಪರ್ಯಾಯ ಮಾರ್ಗ ಯಾವುದು? ಡಿಟೇಲ್ಸ್ ಓದಿ!

ಇವತ್ತು ಜಾಲೇಜಿನಲ್ಲಿ ಪರೀಕ್ಷೆ ನಡೆಯುತ್ತಿತ್ತು. ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ವಾಶ್ ರೂಂಗೆ ಹೋಗುವುದಾಗಿ ಹೇಳಿ ಹೋಗಿದ್ದರು ಎನ್ನಲಾಗಿದೆ. ಈ ವೇಳೆ ಸಿಬ್ಬಂದಿಯು ಅವರ ಜೊತೆಗಿದ್ದರು ಎಂಬ ಮಾಹಿತಿಯಿದೆ. ಆದರೆ ಆನಂತರ ಏನಾಯ್ತು ಎಂಬುದು ಸ್ಪಷ್ಟವಾಗಿಲ್ಲ. 

 

ಸದ್ಯ ಸ್ಥಳದಲ್ಲಿ ವಿದ್ಯಾರ್ಥಿನಿಯ ಕುಟುಂಬಸ್ಥರು ,ಸಂಬಂಧಿಗಳು  ಕಾಲೇಜಿನ ಬಳಿ ಜಮಾಯಿಸಿದ್ದು ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನ ನಿಯೋಜಿಸಲಾಗಿದೆ 

 

 

 

 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor