ಮಣಿಪಾಲದಲ್ಲಿ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದ ಶಿವಮೊಗ್ಗದ ವಿದ್ಯಾರ್ಥಿ ಆತ್ಮ#ಹತ್ಯೆ!

ಹಂಚಿಕೊಳ್ಳಿ
WhatsApp Facebook X Telegram
ಅಪರಾಧ ಸುದ್ದಿಗಳಿಗೆ ಸಂಬಂಧಿಸಿದ ಸಾಂದರ್ಭಿಕ ಚಿತ್ರ
crime news image malenadutoday

ಮಲೆನಾಡು ಟುಡೆ ಸುದ್ದಿ / ಮಣಿಪಾಲ / ಇಲ್ಲಿನ ಎಂಐಟಿ ಕಾಲೇಜಿನಲ್ಲಿ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳೆದ ಸೆಪ್ಟೆಂಬರ್ 22ರ ರಾತ್ರಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಶಿವಮೊಗ್ಗದ ವಿನೋಬನಗರ ನಿವಾಸಿ ಸಮರ್ಥ್ ಆರ್. ಪಾಟೀಲ್ (22) ಎಂದು ಗುರುತಿಸಲಾಗಿದೆ. ಅವರು ಇಲ್ಲಿಯೇ ಒಂದು ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದು, ಅಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ವೈಯಕ್ತಿಕ ಕಾರಣದಿಂದ ಮನನೊಂದಿದ್ದರೆಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು, ಘಟನೆಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.
ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸಹಾಯ ಬೇಕಿದ್ದರೆ: ಆತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ಆತ್ಮಹತ್ಯೆಯ ಆಲೋಚನೆಗಳು ಅಥವಾ ತೀವ್ರ ಮಾನಸಿಕ ಸಂಕಟ ಎದುರಾದರೆ ಒಬ್ಬರೇ ಇರಬೇಡಿ. ಕುಟುಂಬದವರು, ಸ್ನೇಹಿತರು ಅಥವಾ ಮಾನಸಿಕ ಆರೋಗ್ಯ ತಜ್ಞರೊಂದಿಗೆ ತಕ್ಷಣ ಮಾತನಾಡಿ. ತುರ್ತು ಪರಿಸ್ಥಿತಿಯಲ್ಲಿ 112ಕ್ಕೆ ಸಂಪರ್ಕಿಸಿ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor