shivamogga subbaiah medical college
ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಪತ್ತೆಯಾಗಿದೆ. ಆಕೆ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ. ಇಲ್ಲಿ ವ್ಯಾಸಂಗ ಮಾಡುತ್ತಿದ್ದ 22 ವರ್ಷದ ವಿದ್ಯಾರ್ಥಿನಿ ವಿಷ್ಣು ಪ್ರಿಯಾ ಮೃತ ವಿದ್ಯಾರ್ಥಿನಿ. ವಿಷಯ ಗೊತ್ತಾದ ಬೆನ್ನಲ್ಲೆ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸ್ತಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದೆ. ಬೆಂಗಳೂರು ಮೂಲದ ವಿಷ್ಣು ಪ್ರಿಯಾ ಶಿವಮೊಗ್ಗದ ಸುಬ್ಬಯ್ಯ ಕಾಲೇಜಿನಲ್ಲಿ ಮೆಡಿಕಲ್ ಓದುತ್ತಿದ್ದರು. ಸದ್ಯ ಇವರ ಪೋಷಕರು ಬಹರೈನ್ನಲ್ಲಿದ್ದಾರೆ ಎನ್ನಲಾಗಿದ್ದು, ಅವರಿಗೆ ವಿಷಯ ತಿಳಿಸಲಾಗಿದೆ. ಅವರ ಆಗಮನದ ಬಳಿಕ, ಘಟನೆಯ ಬಗ್ಗೆ ಇನ್ನಷ್ಟು ವಿಚಾರ ಪೊಲೀಸರಿಗೆ ತಿಳಿಯುವ ಸಾಧ್ಯತೆ ಇದೆ.
