shivamogga suddi news today ಸುದ್ದಿ 1 : ಮಾಳೂರು ಬಳಿ ಕಾರು ಅಪಘಾತ
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಮಾಳೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮಂಡಗದ್ದೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿದೆ. ಘಟನೆ ಬೆನ್ನಲ್ಲೆ ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಕರೆಂಟ್ ಕಂಬವೊಂದು ತುಂಡಾಗಿ ಬಿದ್ದಿದ್ದು, ಅದೃಷ್ಟಕ್ಕೆ ಕಾರಿನಲ್ಲಿದ್ದವರು ಸೇಫ್ ಆಗಿದ್ದರು ಎಂದು ತಿಳಿದುಬಂದಿದೆ.
ಸುದ್ದಿ 2 : ಮಗನಿಂದ ಹಲ್ಲೆ, ಪೊಲೀಸರಿಗೆ ದೂರು

ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 112 ಪೊಲೀಸರಿಗೆ ಫೋಷಕರೊಬ್ಬರು ಕರೆ ಮಾಡಿ ತಮ್ಮ ಮಗ ಹಲ್ಲೆ ಮಾಡುತ್ತಿರುವುದಾಗಿ ದೂರು ಕೊಟ್ಟಿದ್ದಾರೆ. ತಕ್ಷಣವೇ ಸ್ಥಳಕ್ಕೆ ಹೋದ ಪೊಲೀಸರು ದೂರುದಾರರ ಮಗನಿಗೆ ಸೂಕ್ತ ತಿಳುವಳಿಕೆ ಹಾಗೂ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಈ ಸಂಬಂಧ ಠಾಣೆಗೆ ಬಂದು ದೂರು ನೀಡಲು ತಿಳಿಸಿದ್ದಾರೆ.
shivamogga suddi news today ಸುದ್ದಿ 3 : ಮೃತ ಮಗನ ಮುಖ ನೋಡಲು ಬಿಡದ ಹಿನ್ನೆಲೆ ದೂರು
ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ ತಂದೆಯೊಬ್ಬರು ತಮ್ಮ ಮಗುವಿನ ಮೃತದೇಹವನ್ನು ಅವಕಾಶ ನೀಡುತ್ತಿಲ್ಲ ಎಂದು 112 ಪೊಲೀಸರಿಗೆ ತಿಳಿಸಿದ್ದರು. ಈ ಹಿನ್ನೆಲೆ ಸ್ತಳಕ್ಕೆ ಬಂದ ಪೊಲೀಸರು ಊರಿನ ಮುಖಂಡರ ಸಮ್ಮುಖದಲ್ಲಿ ಎರಡು ಕಡೆಯವರಿಗೆ ಸೂಕ್ತ ತಿಳುವಳಿಕೆ ನೀಡಿ ಮುಂದಿನ ಕಾರ್ಯ ನಡೆಸಲು ಅನುವು ಮಾಡಿಕೊಟ್ಟಿದ್ದಾರೆ.
ಸುದ್ದಿ 4 : ದೇವಾಲಯದಲ್ಲಿ ಮದುವೆಯಾಗಿ ಬಂದ ಸಂಬಂಧಿಕರ ಹುಡುಗ
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನ ಪೊಲೀಸ್ ಠಾಣೆ ಒಂದರ ವ್ಯಾಪ್ತಿಯಲ್ಲಿ ಪೊಲೀಸರಿಗೆ ಕರೆ ಮಾಡಿದ ದೂರುದಾರರೊಬ್ಬರು ಸಂಬಂಧಿಕರ ಹುಡುಗನೊಬ್ಬ ದೇವಸ್ಥಾನದಲ್ಲಿ ಮದುವೆಯಾಗಿ ಹುಡುಗಿಯನ್ನು ಮನೆಗೆ ಕರೆದುಕೊಂಡು ಬಂದಿರುವುದಾಗಿ ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಹುಡುಗ ಹುಡುಗಿಯ ಪೋಷಕರಿಗೆ ವಿಷಯ ತಿಳಿಸಿ ಠಾಣೆಗೆ ಬಂದು ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಲು ತಿಳಿಸಿದ್ದಾರೆ.