ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ 1 ವಾರದವರೆಗೆ ಶಿವಮೊಗ್ಗ-ಬೆಂಗಳೂರು ಕೆಲ ರೈಲು ಸಂಚಾರದಲ್ಲಿ ವ್ಯತ್ಯಯ!

ಹಂಚಿಕೊಳ್ಳಿ
WhatsApp Facebook X Telegram
SWR Train Trains Cancelled Birur-Talguppa Railway Train Servis ChangedChanged Shivamogga-Talaguppa Train train plans affected by the cancellations Marikamba Jatre Special Train Railway Halt Extended Railway Line Block: Shimoga-Bangalore Janshatabdi and Other Trains Cancelledರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸೇತುವೆ ಕಾಮಗಾರಿ ಹಿನ್ನೆಲೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ಸೇರಿದಂತೆ ಹಲವು ರೈಲುಗಳು ರದ್ದಾಗಿವೆ. ಪೂರ್ಣ ವಿವರ ಇಲ್ಲಿದೆ.
SWR Train Trains Cancelled Birur-Talguppa Railway Train Servis Changed Changed Shivamogga-Talaguppa Train Marikamba Jatre Special Train Railway Halt Extended Special Train to Sagara Marikamba Jathre from Feb 3 Shivamogga Train Timings Change 2026 Dasara Special Trains

ಶಿವಮೊಗ್ಗ | ಬೆಂಗಳೂರು ವಿಭಾಗದ ಮಲ್ಲಸಂದ್ರ ಮತ್ತು ಗುಬ್ಬಿ ನಿಲ್ದಾಣಗಳ ನಡುವೆ ಇರುವ ಲೆವೆಲ್ ಕ್ರಾಸಿಂಗ್ (LC No. 50) ದುರಸ್ತಿ ಕಾಮಗಾರಿಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಮತ್ತು ತಾಳಗುಪ್ಪದಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ರೈಲುಗಳ ಸಂಚಾರದಲ್ಲಿ ಏಪ್ರಿಲ್ 15 ರವರೆಗೆ ಬದಲಾವಣೆ ಮಾಡಲಾಗಿದೆ. ಇದರಿಂದಾಗಿ ದೈನಂದಿನ ಪ್ರಯಾಣಿಕರು ಹಾಗೂ ಪ್ರವಾಸಿಗರಿಗೆ ಕೊಂಚ ತೊಂದರೆಯಾಗುವ ಸಾಧ್ಯತೆಯಿದೆ. 

ಶಿವಮೊಗ್ಗದ ತೃಪ್ತಿ ಹೆಲ್ತ್ ಕೇರ್ ವತಿಯಿಂದ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ, ಯಾವಾಗ?

Shivamogga-Talaguppa Train ರೈಲುಗಳ ಸಂಚಾರ ಭಾಗಶಃ ರದ್ದು 

ತಾಳಗುಪ್ಪದಿಂದ ಹೊರಡುವ ಪ್ರಮುಖ ರೈಲುಗಳಲ್ಲಿ ಒಂದಾದ ರೈಲು ಸಂಖ್ಯೆ 20652 (ತಾಳಗುಪ್ಪ–ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್) ಸಂಚಾರದಲ್ಲಿ ಕಡಿತಗೊಳಿಸಲಾಗಿದೆ. ಏಪ್ರಿಲ್ 08, 11, 12 ಮತ್ತು 15 ರಂದು ಈ ರೈಲು ತಾಳಗುಪ್ಪದಿಂದ ಹೊರಟು ಅರಸೀಕೆರೆ ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ. ಅರಸೀಕೆರೆ ಮತ್ತು ಬೆಂಗಳೂರು ನಡುವೆ ಈ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದ್ದು, ಪ್ರಯಾಣಿಕರು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಿದೆ. 

ಮಾರ್ಗ ಬದಲಾವಣೆ 

ಯಶವಂತಪುರದಿಂದ ಶಿವಮೊಗ್ಗಕ್ಕೆ ಬರುವ ರೈಲು ಸಂಖ್ಯೆ 20689 (ಯಶವಂತಪುರ – ಶಿವಮೊಗ್ಗ ಟೌನ್ ಡೈಲಿ ಎಕ್ಸ್‌ಪ್ರೆಸ್) ಸಂಚಾರ ಮಾರ್ಗವನ್ನು ಬದಲಿಸಲಾಗಿದೆ. ಏಪ್ರಿಲ್ 08 ಮತ್ತು 15 ರಂದು ಈ ರೈಲು ಚಿಕ್ಕಬಾಣಾವರ, ನೆಲಮಂಗಲ, ಹಾಸನ ಮತ್ತು ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ. ಮಾರ್ಗ ಬದಲಾವಣೆಯ ಕಾರಣ ಈ ರೈಲು ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ನಿಲುಗಡೆ ನೀಡುವುದಿಲ್ಲ ಎಂಬುದನ್ನು ಪ್ರಯಾಣಿಕರು ಗಮನಿಸಬೇಕು. 

ರೈಲುಗಳ ನಿಯಂತ್ರಣ

ಇನ್ನು ಏಪ್ರಿಲ್ 11 ಮತ್ತು 12 ರಂದು ಯಶವಂತಪುರದಿಂದ ಹೊರಡುವ ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ (20689) ರೈಲನ್ನು ಮಾರ್ಗಮಧ್ಯೆ ಸುಮಾರು 60 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ. ಇದರಿಂದಾಗಿ ಶಿವಮೊಗ್ಗಕ್ಕೆ ನಿಗದಿತ ಸಮಯಕ್ಕಿಂತ ಒಂದು ಗಂಟೆ ತಡವಾಗಿ ರೈಲು ತಲುಪಲಿದೆ. ರೈಲು ಪ್ರಯಾಣಿಕರು ಪ್ರಯಾಣಕ್ಕೆ ಮುನ್ನ ಅಧಿಕೃತ ವೆಬ್‌ಸೈಟ್ ಅಥವಾ ನಿಲ್ದಾಣಗಳಲ್ಲಿನ ವಿಚಾರಣಾ ಕೇಂದ್ರಗಳನ್ನು ಸಂಪರ್ಕಿಸಿ ಖಚಿತಪಡಿಸಿಕೊಳ್ಳಲು ಕೋರಲಾಗಿದೆ.

Shivamogga-Talaguppa Train Service Changes 

Shivamogga-Talaguppa Train train plans affected by the cancellations Marikamba Jatre Special Train Railway Halt Extended Railway Line Block: Shimoga-Bangalore Janshatabdi and Other Trains Cancelledರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸೇತುವೆ ಕಾಮಗಾರಿ ಹಿನ್ನೆಲೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ಸೇರಿದಂತೆ ಹಲವು ರೈಲುಗಳು ರದ್ದಾಗಿವೆ. ಪೂರ್ಣ ವಿವರ ಇಲ್ಲಿದೆ.
Shivamogga-Talaguppa Train
shivamogga car decor sun control house
shivamogga car decor sun control house
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor