ಸಮಟಗಾರು ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ! ಸಚಿವ ಮಧು ಬಂಗಾರಪ್ಪರ ಅಭಿನಂದನೆ

ಹಂಚಿಕೊಳ್ಳಿ
WhatsApp Facebook X Telegram
ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ–2026ಕ್ಕೆ ಆಯ್ಕೆಯಾದ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ–2026 ಕ್ಕೆ (National Teachers Award) ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಸಚಿವ ಮಧು ಬಂಗಾರಪ್ಪರವರನು ಅಭಿನಂದಿಸಿದ್ದಾರಷ್ಟೆ ಅಲ್ಲದೆ ಈ ಬಗ್ಗೆ ತಮ್ಮ ಫೇಸ್​ಬುಕ್​ನ ಖಾತೆಯಲ್ಲಿ ಪೋಸ್ಟ್​ವೊಂದನ್ನ ಬರೆದುಕೊಂಡಿದ್ದಾರೆ.

ದೇಶದಾದ್ಯಂತ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿರುವ 48 ಶಿಕ್ಷಕರಲ್ಲಿ ರತ್ನಕುಮಾರಿ ಸಹ ಒಬ್ಬರು. ಕರ್ನಾಟಕದ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಫೇಸ್​ಬುಕ್​ನಲ್ಲಿ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದ ಮಕ್ಕಳ ಶಿಕ್ಷಣಕ್ಕಾಗಿ ಸೇವೆ ಸಲ್ಲಿಸುತ್ತಿರುವ ರತ್ನಕುಮಾರಿ ಅವರ ಕಾರ್ಯ ಶಿಕ್ಷಕ ಸಮುದಾಯಕ್ಕೆ ಮಾದರಿಯಾಗಿದೆ. ಅವರ ಶೈಕ್ಷಣಿಕ ಸೇವೆ ನಿರಂತರವಾಗಿ ಮುಂದುವರಿಯಲಿ ಎಂದು ಹಾರೈಸಿರುವ ಸಚಿವ ಮಧು ಬಂಗಾರಪ್ಪ, ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಶಿಕ್ಷಕರ ದಿನಾಚರಣೆಯಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರತ್ನಕುಮಾರಿ ಅವರಿಗೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor