ಶಿವಮೊಗ್ಗ : ಜಿಲ್ಲೆಯಲ್ಲಿ ಮೊದಲ ಬಾರಿಗೆ  ಬೆಂಚ್ ಪ್ರೆಸ್ ಸ್ಪರ್ಧೆ, ಸಾವಿರಾರು ಸ್ಪರ್ಧಾರ್ಥಿಗಳು ಭಾಗಿ ? 

ಹಂಚಿಕೊಳ್ಳಿ
WhatsApp Facebook X Telegram
Shivamogga to Host First-Ever Bench Press Championship
Shivamogga to Host First-Ever Bench Press Championship

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ರಾಜ್ಯ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ಮಾರ್ಗದರ್ಶನದಲ್ಲಿ ಶಿವಮೊಗ್ಗ ಡಿಸ್ಟ್ರಿಕ್ಟ್ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ಹಾಗೂ ನಂದಿ ಆರೋಗ್ಯಧಾಮದ ಆಶ್ರಯದಲ್ಲಿ ಡಿ. 18ರಿಂದ 20ರವರೆಗೆ ರಾಜ್ಯಮಟ್ಟದ ಬೆಂಚ್ ಪ್ರೆಸ್ ಸ್ಪರ್ಧೆ ಆಯೋಜಿಸಲಾಗಿದೆ ಎಂದು ರಾಷ್ಟ್ರೀಯ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ಅಧ್ಯಕ್ಷ ಸತೀಶ್ ಕುಮಾರ್ ಕುದ್ರೋಳಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಬೆಂಚ್ ಪ್ರೆಸ್ ಸ್ಪರ್ಧೆ ಆಯೋಜಿಸಲಾಗುತ್ತಿದೆ. ರಾಜ್ಯದ 8ರಿಂದ 10 ಜಿಲ್ಲೆಗಳಿಂದ ಮಹಿಳೆಯರು ಸೇರಿದಂತೆ 1,000ಕ್ಕೂ ಹೆಚ್ಚು ಸ್ಪರ್ಧಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ನಗರದ ಎನ್.ಟಿ. ರಸ್ತೆಯ ಹರಕೆರೆ ನಾರಾಯಣ ಹೃದಯಾಲಯದ ಪಕ್ಕದಲ್ಲಿರುವ ನಂದಿ ಆರೋಗ್ಯಧಾಮದಲ್ಲಿ ಸ್ಪರ್ಧೆಗಳು ನಡೆಯಲಿವೆ. ಪುರುಷರು ಮತ್ತು ಮಹಿಳೆಯರ ಸಬ್ ಜೂನಿಯರ್, ಜೂನಿಯರ್, ಸೀನಿಯರ್ ಹಾಗೂ ಮಾಸ್ಟರ್ಸ್ 1ರಿಂದ 4ನೇ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಇದೇ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.

ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡುವ ಪುರುಷರು ಮತ್ತು ಮಹಿಳೆಯರಿಗೆ ಬೆಸ್ಟ್ ಲಿಫ್ಟರ್ ಪ್ರಶಸ್ತಿ ನೀಡಲಾಗುವುದು. ಪುರುಷರು ಮತ್ತು ಮಹಿಳೆಯರ ತಂಡಗಳಿಗೆ ಪ್ರಥಮ ಹಾಗೂ ದ್ವಿತೀಯ ಬಹುಮಾನ ನೀಡಲಾಗುತ್ತದೆ. ವಿಜೇತರಿಗೆ ಪ್ರಶಸ್ತಿಪತ್ರ, ಪಾರಿತೋಷಕ ಹಾಗೂ ಆಕರ್ಷಕ ಬಹುಮಾನ ವಿತರಿಸಲಾಗುವುದು. ಸ್ಪರ್ಧಾರ್ಥಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.

ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಕ್ರೀಡಾಪಟುಗಳಿಗೆ ಬೆಸ್ಟ್ ಲಿಫ್ಟರ್ ಪ್ರಶಸ್ತಿ ಹಾಗೂ ಟ್ರೋಫಿ ನೀಡಿ ಗೌರವಿಸಲಾಗುವುದು. ಅಲ್ಲದೆ, ಜನವರಿ ಮೊದಲ ವಾರದಲ್ಲಿ ರಾಂಚಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಕರ್ನಾಟಕ ತಂಡವನ್ನು ಇದೇ ಸ್ಪರ್ಧೆಯ ಮೂಲಕ ಆಯ್ಕೆ ಮಾಡಲಾಗುವುದು ಎಂದು ಸತೀಶ್ ಕುಮಾರ್ ಕುದ್ರೋಳಿ ತಿಳಿಸಿದರು.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor