ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ‌ ಉದ್ಯೋಗವಕಾಶ

Shivamogga Veterinary College has announced that it will be holding walk-in interviews on July 15th at 11 am to hire assistant professors on a contract basis.

ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ‌ ಉದ್ಯೋಗವಕಾಶ
Shivamogga Veterinary College

SHIVAMOGGA | MALENADUTODAY NEWS | Jul 9, 2024  ಮಲೆನಾಡು ಸಹಾಯಕ ಪ್ರಾಧ್ಯಾಪಕರುಗಳ ನೇಮಕಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ, ಶಿವಮೊಗ್ಗ ಇಲ್ಲಿ ಜುಲೈ 15 ರಂದು ಬೆಳಗ್ಗೆ 11 ಗಂಟೆಯಿಂದ ನೇರ ಸಂದರ್ಶನ ನಡೆಸಲಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಖಾಲಿಯಿರುವ ಪ್ರಾಣಿ ಆಹಾರ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಔಷಧ ಹಾಗೂ ವಿಷಶಾಸ್ತ್ರ ವಿಭಾಗ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು ಸಮುದಾಯ ರೋಗ ಅಧ್ಯಯನ ಶಾಸ್ತ್ರ ವಿಭಾಗ, ಜಾನುವಾರು ಸಾಕಾಣಿಕಾ ಸಂಕೀರ್ಣ ವಿಭಾಗ (ಪ್ರಾಣಿ ಅನುವಂಶೀಯತೆ ಮತ್ತು ತಳಿಶಾಸ್ತ್ರ), ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಶಸ್ತ್ರಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗುವುದು. 

ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದ್ದು, ಆಯ್ಕೆಯಾದ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ. 56,700/- ಮತ್ತು ಪ್ರಮಾಣ ಪತ್ರ ಹೊಂದಿರದ ಅಭ್ಯರ್ಥಿಗಳಿಗೆ ಮಾಸಿಕ ರಊ. 50,000/- ವೇತನ ಪಾವತಿಸಲಾಗುವುದು ಎಂದು ಡೀನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-200872 ಅಥವಾ ವೆಬ್‍ಸೈಟ್ www.kvafsu.edu.in   ನ್ನು ಸಂಪರ್ಕಿಸುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

Shivamogga Veterinary College has announced that it will be holding walk-in interviews on July 15th at 11 am to hire assistant professors on a contract basis. T