ಮತದಾರರ ಪಟ್ಟಿ ಪರಿಷ್ಕರಣೆ ಅವಧಿ ಆಗಸ್ಟ್ 8ರವರೆಗೆ ವಿಸ್ತರಣೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಹಂಚಿಕೊಳ್ಳಿ
WhatsApp Facebook X Telegram
Shivamogga Voter List Revision Extended
Shivamogga Voter List Revision Extended

Shivamogga Voter List ಶಿವಮೊಗ್ಗ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಸಮಯಾವಧಿಯನ್ನು ಭಾರತ ಚುನಾವಣಾ ಆಯೋಗವು ಆಗಸ್ಟ್ 8ರವರೆಗೆ ವಿಸ್ತರಿಸಿದ್ದು, ಸಾರ್ವಜನಿಕರು ಇದರ ಪೂರ್ಣ ಲಾಭ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮನವಿ ಮಾಡಿದ್ದಾರೆ.

ಶಿವಮೊಗ್ಗ : ಆಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿಗೆ 03 ವರ್ಷ ಜೈಲು ಶಿಕ್ಷೆ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 8ರವರೆಗೂ ಬಿಎಲ್‌ಒ (BLO) ಸಿಬ್ಬಂದಿ ಮನೆಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಆಗಸ್ಟ್ 17ರಂದು ಕರಡು ಮತದಾರರ ಪಟ್ಟಿ ಬಿಡುಗಡೆಯಾಗಲಿದ್ದು, ಸೆಪ್ಟೆಂಬರ್ 16ರವರೆಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗುತ್ತದೆ. ಇವುಗಳನ್ನು ಅಕ್ಟೋಬರ್ 15ರೊಳಗೆ ಪರಿಶೀಲಿಸಿ, ಅಕ್ಟೋಬರ್ 19ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದರು. 

ಜಿಲ್ಲೆಯಲ್ಲಿರುವ ಒಟ್ಟು 15,19,459 ಅರ್ಹ ಮತದಾರರಲ್ಲಿ ಈಗಾಗಲೇ 12,93,844 ಜನರ ದತ್ತಾಂಶವನ್ನು ಡಿಜಿಟಲೀಕರಿಸಲಾಗಿದ್ದು, ಶೇ. 85.15ರಷ್ಟು ಸಾಧನೆಯಾಗಿದೆ. ಇದರಲ್ಲಿ 6,196 ನಾಗರಿಕರು ಆನ್‌ಲೈನ್ ಮೂಲಕ ಭಾಗವಹಿಸಿದ್ದರೆ, ಇನ್ನುಳಿದ 69,603 ಮಂದಿ ಪ್ರಕ್ರಿಯೆಯಿಂದ ಹೊರಗುಳಿದಿದ್ದಾರೆ. ಈ ಹಿನ್ನೆಲೆಯಲ್ಲಿ 1,793 ಮತಗಟ್ಟೆ ಅಧಿಕಾರಿಗಳು ಮನೆಮನೆಗೆ ತೆರಳಿ ವಿವರ ಸಂಗ್ರಹಿಸಿ ಅಪ್‌ಲೋಡ್ ಮಾಡಲಿದ್ದಾರೆ.

ಪರಿಶೀಲನೆ ವೇಳೆ ಗೈರುಹಾಜರಿ, ಮರಣ, ಸ್ಥಳಾಂತರ ಹಾಗೂ ದ್ವಿಪ್ರತಿಯಾಗಿರುವ ಒಟ್ಟು 1,56,012 ಮತದಾರರನ್ನು ಪತ್ತೆಹಚ್ಚಲಾಗಿದೆ. ಇದರಲ್ಲಿ 43,845 ಮೃತರನ್ನು ಹಾಗೂ 72,544 ಸ್ಥಳಾಂತರಗೊಂಡವರನ್ನು ಗುರುತಿಸಲಾಗಿದೆ. ಇನ್ನುಳಿದವರ ಮನೆಗಳಿಗೆ ಬಿಎಲ್‌ಒ ಅಧಿಕಾರಿಗಳು ನೇರವಾಗಿ ಭೇಟಿ ನೀಡಿ ಅಗತ್ಯ ಡೇಟಾ ಕಲೆಹಾಕುವ ಕಾರ್ಯ ನಿರಂತರವಾಗಿ ನಡೆಯಲಿದೆ.

ಈ ಪ್ರಮುಖ ಕಾರ್ಯದ ಕುರಿತು ರಾಷ್ಟ್ರೀಯ ಹಾಗೂ ಸ್ಥಳೀಯ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ತಲಾ ಎರಡು ಸಭೆಗಳನ್ನು ನಡೆಸಿ ಮಾಹಿತಿ ಒದಗಿಸಲಾಗಿದೆ. ಪ್ರಕ್ರಿಯೆಯು ಸುಸೂತ್ರವಾಗಿ ನಡೆಯಲು ಪ್ರತಿಯೊಬ್ಬರೂ ಸಹಕರಿಸಬೇಕೆಂದು ಅವರು ಕೋರಿದರು.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor