
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗದಲ್ಲಿ ಉದ್ಯೋಗ ಹುಡುಕುತ್ತಿರುವ ಪದವೀಧರರಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 16ರಂದು ನೇರ ಸಂದರ್ಶನ ಆಯೋಜಿಸಲಾಗಿದೆ. ಬೆಳಿಗ್ಗೆ 10 ಗಂಟೆಯಿಂದ ಸಂದರ್ಶನ ನಡೆಯಲಿದ್ದು, 18ರಿಂದ 35 ವರ್ಷ ವಯೋಮಾನದ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ ಎಂದು ವಾರ್ತಾ ಇಲಾಖೆ ಮೂಲಕ ನೀಡಲಾಗಿರುವ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಉಳಿದಂತೆ ಪ್ರಕಟಣೆಯ ವಿವರ ಹೀಗಿದೆ
ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆಯೋಜಿಸಿರುವ ಈ ನೇರ ಸಂದರ್ಶನದಲ್ಲಿ ಪಿರಮಲ್ ಫೈನಾನ್ಸ್ ಪ್ರೈ. ಲಿ. ಖಾಸಗಿ ಕಂಪನಿ ಭಾಗವಹಿಸಲಿದೆ. ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ನೇರ ಉದ್ಯೋಗ ಸಂದರ್ಶನ / ವಿದ್ಯಾರ್ಹತೆ ಮತ್ತು ವಯೋಮಿತಿ
ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ. ಅಭ್ಯರ್ಥಿಗಳ ವಯಸ್ಸು 18ರಿಂದ 35 ವರ್ಷದೊಳಗಿರಬೇಕು. ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದ್ದು, ಆಸಕ್ತ ಅಭ್ಯರ್ಥಿಗಳು ನೇರವಾಗಿ ಹಾಜರಾಗಬಹುದು.
ಸಂದರ್ಶನಕ್ಕೆ ತರಬೇಕಾದ ದಾಖಲೆಗಳು
ಸಂದರ್ಶನದಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ (Resume) ಹಾಗೂ ಆಧಾರ್ ಕಾರ್ಡ್ ಪ್ರತಿಗಳನ್ನು ಕಡ್ಡಾಯವಾಗಿ ತರಬೇಕು. ಅರ್ಹ ಅಭ್ಯರ್ಥಿಗಳು ನಿಗದಿತ ದಿನದಂದು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

ಸಂದರ್ಶನ ನಡೆಯುವ ಸ್ಥಳ
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗದಲ್ಲಿ ಅಕ್ಟೋಬರ್ 16ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ನಡೆಯಲಿದೆ.ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು. ಇಲ್ಲವೇ 9380663606 ಅಥವಾ 9108235132 ದೂರವಾಣಿ ಸಂಖ್ಯೆಗಳ ಮೂಲಕ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

