ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ (Shivamogga Walk-in Interview)ಉದ್ಯೋಗಾಕಾಂಕ್ಷಿಗಳಿಗಾಗಿ ಸೆಪ್ಟೆಂಬರ್ 10ರಂದು ಬೆಳಗ್ಗೆ 10 ಗಂಟೆಗೆ ನೇರ ಉದ್ಯೋಗ ಸಂದರ್ಶನ ಆಯೋಜಿಸಲಾಗಿದೆ. ಈ ಸಂದರ್ಶನದಲ್ಲಿ ಡೆಲಿವರಿ ಪ್ರೈವೇಟ್ ಲಿಮಿಟೆಡ್ ಹಾಗೂ ಶ್ರೀರಾಮ್ ಲೈಫ್ ಇನ್ಸೂರೆನ್ಸ್ ಕಂಪನಿಗಳು ಭಾಗವಹಿಸಲಿದ್ದು, ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ವಿವಿಧ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಿವೆ.
- SSLC, PUC, ITI, ಡಿಪ್ಲೊಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾಗಿರುವ 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಈ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
- ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೊನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯುವ ಸಂದರ್ಶನಕ್ಕೆ ನಿಗದಿತ ಸಮಯದಲ್ಲಿ ಹಾಜರಾಗಬಹುದು.
- ಹೆಚ್ಚಿನ ಮಾಹಿತಿಗಾಗಿ 5.9380663606, 9108235132 3 ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.
ಕುವೆಂಪು ವಿಶ್ವವಿದ್ಯಾಲಯದಲ್ಲಿ ಮಹಿಳಾ ವೈದ್ಯರ ನೇಮಕ; ಸೆ.19ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಕುವೆಂಪು ವಿಶ್ವವಿದ್ಯಾಲಯದ ಶಂಕರಘಟ್ಟದಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಮಹಿಳಾ ವೈದ್ಯರ ಹುದ್ದೆಯನ್ನು ತಾತ್ಕಾಲಿಕ ಅಥವಾ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ವಿಶ್ವವಿದ್ಯಾಲಯ ನಿಗದಿಪಡಿಸಿರುವ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 19ರೊಳಗೆ ಕುಲಸಚಿವರು, ಕುವೆಂಪು ವಿಶ್ವವಿದ್ಯಾಲಯ, ಜ್ಞಾನ ಸಹ್ಯಾದ್ರಿ, ಶಂಕರಘಟ್ಟ–577451 ಈ ವಿಳಾಸಕ್ಕೆ ಸಲ್ಲಿಸಬಹುದು.
ಅರ್ಜಿ ನಮೂನೆ, ಹುದ್ದೆಗೆ ಬೇಕಾದ ಅರ್ಹತೆ ಹಾಗೂ ನೇಮಕಾತಿಗೆ ಸಂಬಂಧಿಸಿದ ಇತರ ವಿವರಗಳನ್ನು ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ www.kuvempu.ac.in ನಲ್ಲಿ ಪಡೆಯಬಹುದು ಎಂದು ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ.
